ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ ಬಗ್ಗೆ ಸೇನೆ ಮತ್ತು ಅಮರನಾಥ ದೇಗುಲ ಆಡಳಿತ ಮಂಡಳಿ ಕಾಳಜಿ ವಹಿಸಿದೆ. ಆತಂಕ ಪಡುವ ಅಗತ್ಯವಿಲ್ಲ, ಪಂಚತರಣಿಯಲ್ಲಿ ಎಲ್ಲ ವ್ಯವಸ್ಥೆ ಮಾಡಿದ್ದಾರೆ ಎಂದರು.
ಯಾತ್ರೆಗೆ ತೆರಳಿದ್ದ ಗದಗ ಜಿಲ್ಲೆಯ 23 ಜನರು ಸಿಲುಕಿದ್ದಾರೆ. ಈ ಪೈಕಿ ವಿಶಾಲ್, ವಿನೋದ್ ಎಂಬುವರಿಗೆ ಕರೆ ಮಾಡಿ ಮಾತನಾಡಿದ್ದೇನೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ ಸಂಪರ್ಕದಲ್ಲಿದ್ದೇನೆ. ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿದ್ದೇನೆ. ಹಿರಿಯ ಅಧಿಕಾರಿಗಳ ತಂಡ ರಚಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಕೆಲವು ಹಿರಿಯ ಐಎಎಸ್ ಅಧಿಕಾರಿಗಳು ಯಾತ್ರಿಗಳ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.
ಹವಾಮಾನ ಸುಧಾರಣೆ ಹಿನ್ನೆಲೆ ಹೆಲಿಕಾಪ್ಟರ್ ಮೂಲಕ ಯಾತ್ರಾರ್ಥಿಗಳನ್ನು ಪಂಚತರಣಿಯಿಂದ ನೀಲಗ್ರತ್ ಸ್ಥಳಾಂತರಿಸಲಾಗಿದೆ. ಭಯದ ವಾತಾವರಣದಿಂದ ಯಾತ್ರಾರ್ಥಿಗಳು ಹೊರ ಬಂದಿದ್ದಾರೆ. ಬೆಂಗಳೂರಿನ ರಾಜೇಂದ್ರ ಎಂಬುವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಚಿಕಿತ್ಸೆಗೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇನ್ನು ನಾಲ್ಕೈದು ಗಂಟೆಗಳಲ್ಲಿ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತಲುಪುತ್ತಾರೆ. ಇಂದು ಸಂಜೆಯೊಳಗೆ ಶ್ರೀನಗರಕ್ಕೆ ತಲುಪಲಿದ್ದಾರೆ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸುರಕ್ಷಿತ : ದಕ್ಷಿಣ ಕನ್ನಡ ಜಿಲ್ಲೆಯ 20 ಮಂದಿ ಯಾತ್ರಾರ್ಥಿಗಳು ಸಿಆರ್ಪಿಎಫ್ನ ಕ್ಯಾಂಪ್ನಲ್ಲಿ ಸುರಕ್ಷಿತವಾಗಿದ್ದಾರೆ. ಬಂಟ್ಬಾಳ ತಾಲೂಕಿನ ನರಿಕೊಂಬಿನ ಸಂತೋಷ್ ಮಾರುತಿನಗರ ನೇತೃತ್ವದ ತಂಡ ರಂಭಾನ್ ಎಂಬಲ್ಲಿ ಉಂಟಾದ ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿತ್ತು. ಮಣ್ಣು ತೆರವು ಕಾರ್ಯ ನಡೆಯುತ್ತಿದ್ದರೂ ಮತ್ತೆ ಭೂಕುಸಿತ ಉಂಟಾಗಿದೆ. ಹೀಗಾಗಿ ಯಾತ್ರಿಗಳು ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. ಆದರೆ ಈ ತಂಡಕ್ಕೆ ಇತ್ತ ಅಮರನಾಥ ದೇವಾಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಪರದಾಡುವಂತಾಗಿತ್ತು. ಹೀಗಾಗಿ ಸಿಆರ್ಪಿಎಫ್ ಕ್ಯಾಂಪ್ನಲ್ಲಿ ಸುರಕ್ಷಿತವಾಗಿ ನೆಲೆಸಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…