ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಪ್ರತಿಭಟನೆ

ಮೈಸೂರು: ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಬಂಧನ ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಎಬಿವಿಪಿ ಪದಾಧಿಕಾರಿಗಳು, ʻಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದು ಖಂಡನೀಯʼ ಎಂದು ಟೀಕಿಸಿದರು.

ಮಹಾರಾಷ್ಟ್ರ ಸರ್ಕಾರದ ಈ ಕೃತ್ಯ ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಮುಗಿಸುವ ಷ್ಯಡ್ಯಂತ್ರವಾಗಿದೆ. ಇದರಿಂದ ಮಹಾರಾಷ್ಟ್ರ ಸರ್ಕಾರದ ಪ್ರಜಾಪ್ರಭುತ್ವದ ವಿರೋಧಿ ಮುಖವಾಡ ಬಯಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಈ ಕೂಡಲೇ ಅರ್ನಬ್ ಗೋಸ್ವಾಮಿ ಅವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

× Chat with us