ಹೋಮ-ಹವನ: ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಮುಂದಾಗಿ ತಹಸಿಲ್ದಾರ್‌ ವಿರುದ್ಧ ಸೋಂಕಿತರ ಆಕ್ರೋಶ

ಹೊನ್ನಾಳಿ: ನಿಯಮ ಉಲ್ಲಂಘಿಸಿ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಹೋಮ-ಹವನ ಮಾಡಿದ್ದ ಶಾಸಕ ರೇಣುಕಾಚಾರ್ಯ ವಿರುದ್ಧ ಕ್ರಮಕ್ಕೆ ಮುಂದಾದ ತಹಸಿಲ್ದಾರ್‌ ವಿರುದ್ಧವೇ ಕೊರೊನಾ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂಬ ತಹಸಿಲ್ದಾರ್‌ ಹೇಳಿಕೆಗೆ ಸೋಂಕಿತರು ಕಿಡಿಕಾರಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅರಬಗಟ್ಟೆಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಈ ಘಟನೆ ನಡೆಯಿತು.

ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದರೆ ನಾವು ಉಪಾಹಾರ ಸೇವಿಸುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು.

× Chat with us