ನವದೆಹಲಿ : ‘ನನ್ನ ಹೆಸರು ಸಾವರ್ಕರ್ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ’ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್ ಅವರ ಮೊಮ್ಮಗ ಕಿಡಿಕಾರಿದ್ದಾರೆ. ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿಯವರು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ನಡೆಸಿದ್ದ ಮೊದಲ ಸುದ್ದಿಗೋಷ್ಠಿಯಲ್ಲಿ, ಸಾವರ್ಕರ್ ಹೆಸರು ಉಲ್ಲೇಖಿಸಿ ಹೇಳಿಕೆ ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ‘ಕ್ಷಮೆ ಕೇಳಲು ನಾನೇನು ಸಾವರ್ಕರ್ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸಾವರ್ಕರ್ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡುವ ದಾಖಲೆಗಳನ್ನು ತೋರಿಸುವಂತೆ ಅವರಿಗೆ ಸವಾಲು ಹಾಕುತ್ತೇನೆ’ ಎಂದಿದ್ದಾರೆ.
‘ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರುಗಳನ್ನು ಬಳಸುವುದು ತಪ್ಪು ಮತ್ತು ಶೋಚನೀಯ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಕೊಳ್ಳೇಗಾಲ ನಗರಸಭೆ ವ್ಯಾಪ್ತಿಯ ಬಸ್ತೀಪುರದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಕ್ರಮ…
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…