BREAKING NEWS

ತಾತ ಕ್ಷಮೆ ಕೇಳಿದ್ದನ್ನು ಸಾಬೀತು ಮಾಡಿ : ರಾಹುಲ್‌ಗೆ ಸಾವರ್ಕರ್ ಮೊಮ್ಮಗ ಸವಾಲು

ನವದೆಹಲಿ : ‘ನನ್ನ ಹೆಸರು ಸಾವರ್ಕರ್‌ ಅಲ್ಲ, ಗಾಂಧಿ. ಗಾಂಧಿ ಎಂದಿಗೂ ಕ್ಷಮೆ ಕೇಳುವುದಿಲ್ಲ’ ಎಂದು ಹೇಳಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಹಿಂದೂ ರಾಷ್ಟ್ರವಾದಿ ವಿ.ಡಿ. ಸಾವರ್ಕರ್‌ ಅವರ ಮೊಮ್ಮಗ ಕಿಡಿಕಾರಿದ್ದಾರೆ. ತಮ್ಮ ತಾತ ಬ್ರಿಟೀಷರ ಬಳಿ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.
ರಾಹುಲ್‌ ಗಾಂಧಿಯವರು ಕ್ರಿಮಿನಲ್‌ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವ ಕಳೆದುಕೊಂಡ ಬಳಿಕ ನಡೆಸಿದ್ದ ಮೊದಲ ಸುದ್ದಿಗೋಷ್ಠಿಯಲ್ಲಿ, ಸಾವರ್ಕರ್‌ ಹೆಸರು ಉಲ್ಲೇಖಿಸಿ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಾವರ್ಕರ್‌ ಮೊಮ್ಮಗ ರಂಜಿತ್‌ ಸಾವರ್ಕರ್‌, ‘ಕ್ಷಮೆ ಕೇಳಲು ನಾನೇನು ಸಾವರ್ಕರ್‌ ಅಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಸಾವರ್ಕರ್‌ ಕ್ಷಮೆ ಕೇಳಿದ್ದರು ಎಂಬುದನ್ನು ಸಾಬೀತು ಮಾಡುವ ದಾಖಲೆಗಳನ್ನು ತೋರಿಸುವಂತೆ ಅವರಿಗೆ ಸವಾಲು ಹಾಕುತ್ತೇನೆ’ ಎಂದಿದ್ದಾರೆ.
‘ರಾಜಕೀಯ ಪ್ರಚಾರಕ್ಕಾಗಿ ದೇಶಪ್ರೇಮಿಗಳ ಹೆಸರುಗಳನ್ನು ಬಳಸುವುದು ತಪ್ಪು ಮತ್ತು ಶೋಚನೀಯ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

lokesh

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

19 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

20 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

21 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

21 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

21 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

21 hours ago