BREAKING NEWS

ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ: ಪರಮೇಶ್ವರ್‌

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿನ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಉಂಟು ಮಾಡಿತ್ತು. ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದ್ದು, ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ, ಸಿಐಟಿ ಪರೀಕ್ಷೆಯಲ್ಲಿ ಪತ್ರಿಕೆ ಸೋರಿಕೆ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರಲ್ಲಿ ಅಕ್ರಮ ನಡೆದಿದ್ದೇ ಆದರೆ ಕ್ರಮ ಕೈಗೊಳ್ಳುತ್ತೇವೆ. ಬೆಂಗಳೂರಿನಲ್ಲಿಯೇ ಪಿಎಸ್‌ಐ ನೇಮಕ ಪರೀಕ್ಷೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಸಿದಂತೆ ಗುಪ್ರಚರ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ. ಮಾಹಿತಿ ಪಡೆಯುವಾಗ ಆಡಿಯೋ ಬೆಳಕಿಗೆ ಬಂದಿದೆ. ಮಾಹಿತಿ ಕಲೆ ಹಾಕಲು ಫೇಕ್ ಆಡಿಯೋ ಮಾಡಿದ್ದೆ ಅಂತ ಪಿಎಸ್ಐ ಲಿಂಗಯ್ಯ ಹೇಳಿದ್ದಾರೆ. ಆಡಿಯೋ ಸತ್ಯನಾ, ಅಲ್ವಾ ಅನ್ನೋದರ ಬಗ್ಗೆ ಸಿಸಿಬಿ ತನಿಖೆ ಮಾಡುತ್ತಿದೆ ಎಂದು ವಿವರಿಸಿದ್ದಾರೆ.

ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ, ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಿ ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಮೊದಲನೇ ಹಂತದಲ್ಲಿ ಸಮಿತಿ ರಚನೆ ಮಾಡಿದ್ದಾರೆ. ಅದರಿಂದ ಸಂವಿಧಾನ ತಿದ್ದುಪಡಿ ಆಗಲಿದೆಯಾ ಅಥವಾ ಇಲ್ಲವಾ ಎಂಬ ವರದಿ ನೀಡುತ್ತಾರೆ. ಸಮಿತಿಯ ಸದಸ್ಯರ ಶಿಫಾರಸ್ಸು ಏನೆಂದು ನೋಡಬೇಕು ಎಂದರು.

ಲೋಕಸಭಾ ಚುನಾವಣೆಗೆ ಸಚಿವರ ಸ್ಪರ್ಧೆ ವಿಚಾರವಾಗಿ, ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಅದರಲ್ಲಿ ನಮ್ಮ ಸ್ಕ್ರೀನಿಂಗ್‌ ಕಮಿಟಿ ಅಧ್ಯಕ್ಷರು ಬಂದಿದ್ದರು. ನಮಗೆ ಕೊಟ್ಟಿರುವ ಜವಾಬ್ದಾರಿಗಳ ಮೇಲೆ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

8 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

9 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

13 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

13 hours ago