BREAKING NEWS

ಪಿಎಸ್‌ಐ ನೇಮಕಾತಿ ಹಗರಣ: ಅಮೃತ್ ಪೌಲ್‌ಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಸೋಮವಾರ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಕಾಯ್ದಿರಿಸಿದ್ಧ ಆದೇಶವನ್ನು ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ. ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೇ ವಿದೇಶಕ್ಕೆ ಹೋಗುವಂತಿಲ್ಲ ಇತ್ಯಾದಿ ಷರತ್ತುಗಳನ್ನು ಹಾಕಲಾಗಿದೆ. ಐದು ಲಕ್ಷ ರೂ.ಗಳ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಬೇಕು ಎಂದು ನ್ಯಾಯಪೀಠ ಷರತ್ತುಗಳನ್ನು ವಿಧಿಸಿದೆ.

ಈ ಹಿಂದೆ ಅರ್ಜಿಯ ವಿಚಾರಣೆ ವೇಳೆ ಸರ್ಕಾರ ಪರ ವಕೀಲರಾಗಿದ್ದ ಪ್ರಸನ್ನ ಕುಮಾರ್ ವಾದ ಮಂಡಿಸಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಉತ್ತರ ಪತ್ರಿಕೆಗಳನ್ನು ತಿದ್ದಲು ಕಾರಣರಾಗಿದ್ದರು. ಅಲ್ಲದೆ, ಹಗರಣ ನಡೆದ ವೇಳೆ ಅಮೃತ್ ಪೌಲ್ ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದರು. ಆ ಸಮಯದಲ್ಲಿ ಅವರು ಸುಳ್ಳು ದಾಖಲೆಗಳ ಮೂಲಕ ಕಚೇರಿಗೆ ವೈದ್ಯಕೀಯ ರಜೆ ಹಾಕುವ ಮೂಲಕ ಹಗರಣ ನಡೆಯಲು ಕಾರಣವಾಗಿದ್ದರು.

ಉತ್ತರ ಪತ್ರಿಕೆಗಳನ್ನು ತಿದ್ದಿದ 2021ರ ಅ.7, 8 ಮತ್ತು 16ರಂದು ಆರೋಪಿಯು ವೈದ್ಯಕೀಯ ರಜೆಯಲ್ಲಿ ಇದ್ದುದಾಗಿ ಹೇಳಿ ಪ್ರಮಾಣಪತ್ರ ನೀಡಿದ್ದಾರೆ. ಆದರೆ, ಅವರು ಆ ದಿನಗಳಂದು ತಮ್ಮ ಪ್ರಮಾಣ ಪತ್ರದಲ್ಲಿ ಹೇಳಿರುವ ಯಲಹಂಕ ನ್ಯೂ ಟೌನ್‌ನಲ್ಲಿರುವ ನವಚೇತನ ಆಸ್ಪತ್ರೆಯಲ್ಲಿ ಯಾವುದೇ ಚಿಕಿತ್ಸೆ ಪಡೆದೇ ಇಲ್ಲ. ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲನೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ.

ಹಾಗೆಯೇ, ಆ ದಿನಗಳಲ್ಲಿ ಸ್ಟ್ರಾಂಗ್‌ ರೂಮ್ ಬೀಗಗಳನ್ನು ತಮ್ಮ ವೈಯಕ್ತಿಕ ಕೊಠಡಿಯಲ್ಲಿರಿಸಿದ್ದರು. ಅಲ್ಲಿಂದ ಬೇರೆಯವರಿಗೆ ಹಸ್ತಾಂತರ ಮಾಡಿದ್ದಾರೆ ಎಂದು ವಾದ ಮಂಡಿಸಿದರು.

ಅರ್ಜಿದಾರರ ಪರ ಹಿರಿಯ ವಕೀಲ ಎಂ.ಎಸ್.ಶ್ಯಾಮಸುಂದರ್, ಪ್ರಕರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ(ಸಿಆರ್‌ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ.

ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೆಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ಪೀಠಕ್ಕೆ ತಿಳಿಸಿದ್ದರು. ಅಲ್ಲದೆ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿಯಲ್ಲಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ವಿವರಿಸಿದ್ದರು.

ಪ್ರಕರಣವೇನು?: ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪವಿದೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿದ್ದರು. ಬಳಿಕ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago