ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಇಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪ್ರಾಥಮಿಕ ಉಪಗ್ರಹ ಡಿಎಸ್-ಎಸ್‌ಎಆರ್, 6 ಸಹ-ಪ್ರಯಾಣಿಕ ಉಪಗ್ರಹಗಳು ಸೇರಿದಂತೆ 7 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ-ಸಿ 56 ರಾಕೆಟ್‌ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಇಂದು ಬೆಳಗ್ಗೆ 6:30ಕ್ಕೆ ಉಪಗ್ರಹಗಳನ್ನು ಉಡಾವಣೆ ಮಾಡಲಾಯಿತು. ಎಲ್ಲ ಏಳು ಉಪಗ್ರಹಗಳನ್ನು ಪಿಎಸ್‌ಎಲ್‌ವಿ-ಸಿ 56 ರಾಕೆಟ್ ನಿಖರವಾಗಿ ಅವುಗಳ ಕಕ್ಷೆಗೆ ಸೇರಿಸಿದೆ.
ಡಿಎಸ್-ಎಸ್‌ಎಆರ್ ಮತ್ತು ಉಳಿದ 6 ಉಪಗ್ರಹಗಳು ಸಿಂಗಾಪುರಕ್ಕೆ ಸೇರಿದ್ದವಾಗಿವೆ. ಸಿಂಗಾಪುರದ ಎಸ್‌ಟಿ ಇಂಜಿನಿಯರಿಂಗ್ ಸಂಸ್ಥೆಗಾಗಿ ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ಈ ಕಾರ್ಯಾಚರಣೆ ನಡೆಸಿದೆ.
ಡಿಎಸ್-ಎಸ್‌ಎಆರ್ ಉಪಗ್ರಹ ಸಿಂಗಾಪೂರ್ ಸರ್ಕಾರವನ್ನು ಪ್ರತಿನಿಧಿಸುತ್ತದೆ ಮತ್ತು ಎಸ್‌ಟಿ ಇಂಜಿನಿಯರಿಂಗ್ ನಡುವಿನ ಪಾಲುದಾರಿಕೆಯ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಡಿಎಸ್-ಎಸ್‌ಎಆರ್ ಎಲ್ಲಾ ಹವಾಗುಣದಲ್ಲಿ ಹಗಲು-ರಾತ್ರಿ ಸೇವೆ ಒದಗಿಸುತ್ತದೆ. ಪೂರ್ಣ ಧ್ರುವೀಯತೆಯಲ್ಲಿ 1m-ರೆಸಲ್ಯೂಶನ್‌ನಲ್ಲಿ ಚಿತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…