ನವದೆಹಲಿ : 40 ಮಂದಿ ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ 2019ರ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗ್ರಹಿಸಿದ್ದಾರೆ.
ಆ ವರ್ಷದ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ರಾಜಕೀಕರಣಗೊಳಿಸಿದರು ಎಂದೂ ಅವರು ಆರೋಪಿಸಿದ್ದಾರೆ ಎಂದು thewire.in ವರದಿ ಮಾಡಿದೆ.
ನವದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸತ್ಯಪಾಲ್ ಮಲಿಕ್ ಅವರು ಈ ಹತ್ಯೆಗಳ ಕುರಿತು ಸರ್ಕಾರದ ಮೌನದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು The Telegraph ಸುದ್ದಿ ಸಂಸ್ಥೆ ವರದಿ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಕೊನೆಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಾಗಿದ್ದು, ಅವರು ಆ ಹುದ್ದೆಯಲ್ಲಿದ್ದಾಗಲೇ ಪುಲ್ವಾಮಾ ಉಗ್ರರ ದಾಳಿಯು ನಡೆದಿತ್ತು.
“40 ಮಂದಿ ಯೋಧರ ಹತ್ಯೆಗೆ ಕಾರಣವಾದ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯ ತನಿಖೆ ನಡೆಯಬೇಕು ಎಂದು ನಾನು ಆಗ್ರಹಿಸುತ್ತೇನೆ. ಇಲ್ಲಿಯವರೆಗೆ ಈ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಕಡು ಮೌನ ಪ್ರದರ್ಶಿಸಿದೆ ಹಾಗೂ ಈ ದುರಂತದಲ್ಲಿನ ಹತ್ಯೆಗಳಿಗೆ ತನ್ನ ಭದ್ರತಾ ವೈಫಲ್ಯವೇ ಕಾರಣ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ” ಎಂದು ಅವರು ಟೀಕಿಸಿದ್ದಾರೆ.
ಪುಲ್ವಾಮಾ ಉಗ್ರರ ದಾಳಿಯ ಕುರಿತು ಸರ್ಕಾರ ಹೊಣೆಗಾರಿಕೆ ಹೊರಬೇಕು ಎಂದು ಸತ್ಯಪಾಲ್ ಮಲಿಕ್ ಇದೇ ಪ್ರಥಮ ಬಾರಿಗೆ ಆಗ್ರಹಿಸುತ್ತಿರುವುದಲ್ಲ. The Wire ಸುದ್ದಿ ಸಂಸ್ಥೆಯ ಕರಣ್ ಥಾಪರ್ ಗೆ ಸ್ಫೋಟಕ ಸಂದರ್ಶನ ನೀಡಿದ್ದ ಅವರು, ಸಿಆರ್‌ಪಿಎಫ್ ತನ್ನ ಯೋಧರನ್ನು ಸಾಗಿಸಲು ಹೆಲಿಕಾಪ್ಟರ್ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಯಾಕೆಂದರೆ, ಅಷ್ಟು ದೊಡ್ಡ ಬೆಂಗಾವಲು ಪಡೆ ರಸ್ತೆಯಲ್ಲಿ ತೆರಳಲು ಸಾಧ್ಯವಿರಲಿಲ್ಲ. ಆದರೆ, ಸಿಆರ್‌ಪಿಎಫ್ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ನಿರಾಕರಿಸಿತ್ತು ಎಂದು ಪ್ರತಿಪಾದಿಸಿದ್ದರು.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…