BREAKING NEWS

ಪುಲ್ವಾಮ ದಾಳಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು: ಸತ್ಯಪಾಲ್‌ ಆಗ್ರಹ

ನವದೆಹಲಿ : 40 ಮಂದಿ ಸಿಆರ್ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ 2019ರ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗ್ರಹಿಸಿದ್ದಾರೆ.

ಆ ವರ್ಷದ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಈ ವಿಷಯವನ್ನು ರಾಜಕೀಕರಣಗೊಳಿಸಿದರು ಎಂದೂ ಅವರು ಆರೋಪಿಸಿದ್ದಾರೆ ಎಂದು thewire.in ವರದಿ ಮಾಡಿದೆ.

ನವದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸತ್ಯಪಾಲ್ ಮಲಿಕ್ ಅವರು ಈ ಹತ್ಯೆಗಳ ಕುರಿತು ಸರ್ಕಾರದ ಮೌನದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು The Telegraph ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದ ಕೊನೆಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಾಗಿದ್ದು, ಅವರು ಆ ಹುದ್ದೆಯಲ್ಲಿದ್ದಾಗಲೇ ಪುಲ್ವಾಮಾ ಉಗ್ರರ ದಾಳಿಯು ನಡೆದಿತ್ತು.

“40 ಮಂದಿ ಯೋಧರ ಹತ್ಯೆಗೆ ಕಾರಣವಾದ ಪುಲ್ವಾಮಾ ಉಗ್ರರ ದಾಳಿಯ ಕುರಿತು ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯ ತನಿಖೆ ನಡೆಯಬೇಕು ಎಂದು ನಾನು ಆಗ್ರಹಿಸುತ್ತೇನೆ. ಇಲ್ಲಿಯವರೆಗೆ ಈ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಕಡು ಮೌನ ಪ್ರದರ್ಶಿಸಿದೆ ಹಾಗೂ ಈ ದುರಂತದಲ್ಲಿನ ಹತ್ಯೆಗಳಿಗೆ ತನ್ನ ಭದ್ರತಾ ವೈಫಲ್ಯವೇ ಕಾರಣ ಎಂದು ಒಪ್ಪಿಕೊಳ್ಳಲು ನಿರಾಕರಿಸುತ್ತಿದೆ” ಎಂದು ಅವರು ಟೀಕಿಸಿದ್ದಾರೆ.

ಪುಲ್ವಾಮಾ ಉಗ್ರರ ದಾಳಿಯ ಕುರಿತು ಸರ್ಕಾರ ಹೊಣೆಗಾರಿಕೆ ಹೊರಬೇಕು ಎಂದು ಸತ್ಯಪಾಲ್ ಮಲಿಕ್ ಇದೇ ಪ್ರಥಮ ಬಾರಿಗೆ ಆಗ್ರಹಿಸುತ್ತಿರುವುದಲ್ಲ. The Wire ಸುದ್ದಿ ಸಂಸ್ಥೆಯ ಕರಣ್ ಥಾಪರ್ ಗೆ ಸ್ಫೋಟಕ ಸಂದರ್ಶನ ನೀಡಿದ್ದ ಅವರು, ಸಿಆರ್‌ಪಿಎಫ್ ತನ್ನ ಯೋಧರನ್ನು ಸಾಗಿಸಲು ಹೆಲಿಕಾಪ್ಟರ್ ಒದಗಿಸಬೇಕು ಎಂದು ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಯಾಕೆಂದರೆ, ಅಷ್ಟು ದೊಡ್ಡ ಬೆಂಗಾವಲು ಪಡೆ ರಸ್ತೆಯಲ್ಲಿ ತೆರಳಲು ಸಾಧ್ಯವಿರಲಿಲ್ಲ. ಆದರೆ, ಸಿಆರ್‌ಪಿಎಫ್ ಮನವಿಯನ್ನು ಕೇಂದ್ರ ಗೃಹ ಸಚಿವಾಲಯವು ನಿರಾಕರಿಸಿತ್ತು ಎಂದು ಪ್ರತಿಪಾದಿಸಿದ್ದರು.

andolanait

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

3 hours ago