ನವದೆಹಲಿ(ರಾಯಿಟರ್ಸ್): ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು ನಡೆಸಿದ ದಾಳಿಗೆ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು. ಈ ದಾಳಿಗೆ ಸರ್ಕಾರ್ ಲೋಪವೇ ಕಾರಣ. ಯೋಧರು ಪ್ರಯಾಣಿಸಬೇಕಿದ್ದ ಮಾರ್ಗದ ಸುರಕ್ಷತೆಯ ತಪಾಸಣೆಯೂ ನಡೆದಿರಲಿಲ್ಲ ಎಂದು ಮಲ್ಲಿಕ್ ʼದಿ ವೈರ್ʼ ಪೋರ್ಟಲ್‌ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು. ಅವರ ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದರೇ, ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೇ ನೀಡಿರಲಿಲ್ಲ.
ಇಂಡಿಯಾ ಟುಡೇ ಟಿ.ವಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್ ಶಾ ಅವರು, ಮಲ್ಲಿಕ್ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅದರ ಅಗತ್ಯವು ಸರ್ಕಾರಕ್ಕೆ ಇಲ್ಲ. ಎಂದು ಗೃಹ ಸಚಿವರು ಹೇಳಿದ್ದಾರೆ.
ಪುಲ್ವಾಮಾ ದಾಳಿ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್ ಅದಕ್ಷತೆಯೇ ಕಾರಣ. ಯೋಧರು ಪ್ರಯಾಣಕ್ಕೆ ವಿಮಾಣ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ. ಈ ಬಗ್ಗೆ ಏನನ್ನೂ ಮಾತನಾಡಬಾರದು ಎಂದು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ನನಗೆ ತಾಕೀತು ಮಾಡಿದ್ದರು ಎಂದು ಮಲ್ಲಿಕ್ ಆರೋಪಿಸಿದ್ದರು. ಆಗ ರಾಜನಾಥ್ ಸಿಂಗ್ ಕೇಂದ್ರ ಗೃಹ ಸಚಿವರಾಗಿದ್ದರು.
ಪಾಕಿಸ್ತಾನ ಮೂಲಕ ಜೈಷ್ ಎ ಮೊಹಮ್ಮದ್ ಉಗ್ರ ಸಂಘನೆಯು ಈ ದಾಳಿ ಹೊಣೆ ಹೊತ್ತಿತ್ತು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…