BREAKING NEWS

ಪುಲ್ವಾಮಾ ದಾಳಿ: ಜನರ ಮುಂದೆ ಸತ್ಯ ಮುಚ್ಚಿಟ್ಟಿಲ್ಲ- ಅಮಿತ್‌ ಶಾ

ನವದೆಹಲಿ(ರಾಯಿಟರ್ಸ್):‌ ಪುಲ್ವಾಮಾ ದಾಳಿ ಬಗ್ಗೆ ಜಮ್ಮು ಮತ್ತು ಕಾಶ್ಮೀರಾದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲ್ಲಿಕ್‌ ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪ್ರಶ್ನಿಸಬೇಕಿದೆ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

2019 ಫೆ.14 ರಂದು ಜಮ್ಮು ಮತ್ತು ಕಾಶ್ಮೀರಾದಲ್ಲಿ ಪುಲ್ವಾಮಾ ಬಳಿ ಉಗ್ರರು ನಡೆಸಿದ ದಾಳಿಗೆ ಸಿಆರ್‌ಪಿಎಫ್‌ನ 40 ಯೋಧರು ಹುತಾತ್ಮರಾದರು. ಈ ದಾಳಿಗೆ ಸರ್ಕಾರ್‌ ಲೋಪವೇ ಕಾರಣ. ಯೋಧರು ಪ್ರಯಾಣಿಸಬೇಕಿದ್ದ ಮಾರ್ಗದ ಸುರಕ್ಷತೆಯ ತಪಾಸಣೆಯೂ ನಡೆದಿರಲಿಲ್ಲ ಎಂದು ಮಲ್ಲಿಕ್‌ ʼದಿ ವೈರ್‌ʼ ಪೋರ್ಟಲ್‌ಗೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದರು. ಅವರ ಈ ಹೇಳಿಕೆಯು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಅದರೇ, ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೇ ನೀಡಿರಲಿಲ್ಲ.

ಇಂಡಿಯಾ ಟುಡೇ ಟಿ.ವಿಯಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅಮಿತ್‌ ಶಾ ಅವರು, ಮಲ್ಲಿಕ್‌ ಹೇಳಿಕೆಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪುಲ್ವಾಮಾ ದಾಳಿ ಬಗ್ಗೆ ದೇಶದ ಜನರ ಮುಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಸತ್ಯ ಮುಚ್ಚಿಟ್ಟಿಲ್ಲ. ಅದರ ಅದರ ಅಗತ್ಯವು ಸರ್ಕಾರಕ್ಕೆ ಇಲ್ಲ. ಎಂದು ಗೃಹ ಸಚಿವರು ಹೇಳಿದ್ದಾರೆ.

ಪುಲ್ವಾಮಾ ದಾಳಿ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್‌ ಅದಕ್ಷತೆಯೇ ಕಾರಣ. ಯೋಧರು ಪ್ರಯಾಣಕ್ಕೆ ವಿಮಾಣ ಕೇಳಿದರೂ ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ ದೊಡ್ಡ ಲೋಪ. ಈ ಬಗ್ಗೆ ಏನನ್ನೂ ಮಾತನಾಡಬಾರದು ಎಂದು ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌ ನನಗೆ ತಾಕೀತು ಮಾಡಿದ್ದರು ಎಂದು ಮಲ್ಲಿಕ್‌ ಆರೋಪಿಸಿದ್ದರು. ಆಗ ರಾಜನಾಥ್‌ ಸಿಂಗ್‌ ಕೇಂದ್ರ ಗೃಹ ಸಚಿವರಾಗಿದ್ದರು.

ಪಾಕಿಸ್ತಾನ ಮೂಲಕ ಜೈಷ್‌ ಎ ಮೊಹಮ್ಮದ್‌ ಉಗ್ರ ಸಂಘನೆಯು ಈ ದಾಳಿ ಹೊಣೆ ಹೊತ್ತಿತ್ತು.

andolanait

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 hour ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

1 hour ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

1 hour ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

1 hour ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

1 hour ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

1 hour ago