ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ ಚುನಾವಣೆಯ ಲಾಭ ಪಡೆಯಲು ರೂಪಿಸಲಾಗಿದ್ದ ಯೋಜನೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳಿದೆ.
‘ಸಿಆರ್‌ಪಿಎಫ್ ಯೋಧರು ಜಮ್ಮುವಿನಿಂದ ಶ್ರೀನಗರಕ್ಕೆ ಬರಲು ಐದು ಕಾಪ್ಟರ್‌ಗಳಿಗೆ ಮನವಿ ಮಾಡಿದ್ದರು. ಆದರೆ ರಕ್ಷಣಾ ಸಚಿವಾಲಯ ಅದನ್ನು ತಿರಸ್ಕರಿಸಿದೆ. ಅವರಿಗೆ ಅಂದು ಕಾಪ್ಟರ್ ಯಾಕೆ ಕೊಡಲಿಲ್ಲ? ಅವರನ್ನು ಯಾಕೆ ಏರ್‌ಲಿಫ್ಟ್ ಮಾಡಲಿಲ್ಲ? ಕಾಪ್ಟರ್ ವ್ಯವಸ್ಥೆ ಮಾಡಿದಿದ್ದರೆ ಭಯೋತ್ಪಾದನೆಯ ಸಂಚು ವಿಫಲವಾಗುತ್ತಿತ್ತು’ ಎಂದು ಕಾಂಗ್ರೆಸ್ ವಕ್ತಾರರಾದ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.
‘ಜೈಶ್ ಸಂಘಟನೆಯ ಬೆದರಿಕೆಗಳನ್ನು ಏಕೆ ನಿರ್ಲಕ್ಷಿಸಯಿತು. 2019ರ ಜನವರಿ 2 ಮತ್ತು ಫೆಬ್ರುವರಿ13 ನಡುವೆ ಭಯೋತ್ಪಾದಕ ದಾಳಿ ನಡೆಯಬಹುದಾದ ಸಾಧ್ಯತೆಗಳ ಬಗ್ಗೆ ಬಂದಿದ್ದ 11 ಗುಪ್ತಚರ ಮಾಹಿತಿಗಳನ್ನು ಏಕೆ ನಿರ್ಲಕ್ಷಿಸಲಾಯಿತು. 300 ಕೆಜಿ ಆರ್‌ಡಿಎಕ್ಸ್ ಅನ್ನು ಉಗ್ರರು ಹೇಗೆ ಸಂಗ್ರಹಿಸಿದರು’ ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.
ಪ್ರಕರಣದ ತನಿಖೆ ಏನಾಯಿತು ಎಂಬುದರ ಬಗ್ಗೆಯೂ ಉತ್ತರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
‘ಕೇಂದ್ರ ಸರ್ಕಾರವು ‘ಕನಿಷ್ಟ ಆಡಳಿತ, ಗರಿಷ್ಠ ಮೌನ’ ಎಂಬ ತತ್ವ ಪಾಲಿಸುತ್ತಿದೆ. ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸರ್ಕಾರದ ಜವಾಬ್ದಾರಿ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಕೇಳುತ್ತಲೇ ಇರುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
2019ರ ಫೆಬ್ರುವರಿ 14ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಸಿಆರ್‌ಪಿಎಪ್‌ನ 40 ಯೋಧರು ಹುತಾತ್ಮರಾಗಿದ್ದರು.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…