ಅಂತರಸಂತೆ : ನಾಗರಹೊಳೆ ಸೊಳ್ಳೆಪುರ ಅರಣ್ಯದ ಮಂಟಳ್ಳಿ ಬೀಳು ಎಂಬಲ್ಲಿ ಶನಿವಾರ ಬೆಳಗಿನ ಜಾವ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ 50 ರಿಂದ 55 ವರ್ಷದ ಗಂಡಾನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ನಾಗರಹೊಳೆ ಸಹಾಯಕ ನಿರ್ದೇಶಕ ಧನಂಜಯ ಮಾತನಾಡಿ, ಕಳೆದ ಹಲವು ತಿಂಗಳಿಂದ ವೀರನಹೊಸಹಳ್ಳಿ ಅರಣ್ಯದಂಚಿನಲ್ಲಿ ದಾಂದಲೆ ನಡೆಸಿ ರೈತರ ಫಸಲು ನಷ್ಟ ಮಾಡುತ್ತಿದ್ದ ಆನೆಯನ್ನು ಬಂಧಿಸುವ ನಿಟ್ಟಿನಲ್ಲಿ ಇಲಾಖೆ ಮೂರು ದಿನದಿಂದ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಆನೆಗಳಾದ ಅಭಿಮನ್ಯು, ಮಹೇಂದ್ರ, ಭೀಮ (ಮಹಾರಾಷ್ಟ್ರ) ಭೀಮ ಕರ್ನಾಟಕ, ಹರ್ಷ, ಅಶ್ವತ್ಥಾಮ ಆನೆ ಮತ್ತು ಇಲಾಖೆಯ 70 ಸಿಬ್ಬಂದಿ ಭಾಗವಹಿಸಿದ್ದರು.
ಅರಣ್ಯದಲ್ಲಿ ಇಂದು ಸೆರೆಹಿಡಿದ ಆನೆ ಅಭಿಮನ್ಯು ಗಿಂತಲೂ ದೊಡ್ಡದಾಗಿದ್ದು, ಇದನ್ನು ಪಳಗಿಸಲು ಮತ್ತಿಗೋಡು ಆನೆ ಶಿಬಿರಕ್ಕೆ ಕಳುಹಿಸಲಾಗುವುದು ಎಂದು ಡಿ.ಸಿ.ಎಫ್ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…