Group of excited school children cheering in classroom
ಚಂಡೀಗಡ : ಖಾಸಗಿ ಶಾಲೆಗಳ ವಿರುದ್ಧ ಸಲ್ಲಿಕೆಯಾದ ದೂರುಗಳನ್ನು ತನಿಖೆಗೆ ಒಳಪಡಿಸಲು ಪ್ರತಿ ಜಿಲ್ಲೆಗಳಲ್ಲೂ ವಿಶೇಷ ತಂಡ ರಚಿಸಲಾಗುವುದು ಎಂದು ಪಂಜಾಬ್‌ನ ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದ ಆಪ್ ಸರ್ಕಾರ ಘೋಷಿಸಿದೆ.
ಖಾಸಗಿ ಶಾಲೆಗಳು ದಾಖಲಾತಿ ಶುಲ್ಕ, ಪುಸ್ತಕ, ಜೆರಾಕ್ಸ್ ಕಾಪಿ ಹಾಗೂ ದೇಣಿಗೆ ಸಂಗ್ರಹ ಮುಂತಾದುವುಗಳಿಂದ ಹಣವನ್ನು ಕೊಳ್ಳೆ ಹೊಡೆಯುತ್ತಿವೆ ಎಂದು ವಿದ್ಯಾರ್ಥಿಗಳ ಹೆತ್ತವರಿಂದ ಹಲವಾರು ದೂರುಗಳು ಬಂದಿವೆ. ಹೀಗಾಗಿ ಈ ನಿರ್ಧಾರವನ್ನು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ತೆಗೆದುಕೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತಿ ತಂಡದಲ್ಲಿ ಒಂದು ಜಿಲ್ಲೆಯಿಂದ ಮೂವರು ಪ್ರಾಂಶುಪಾಲರು ಇರಲಿದ್ದು, ಅವರು ಶಿಕ್ಷಣ ಸಚಿವರಿಗೆ ಸಲ್ಲಿಕೆಯಾದ ದೂರುಗಳನ್ನು ಪರಿಶೀಲಿಸಿ ಖಾಸಗಿ ಶಾಲೆಗಳ ವಿರುದ್ಧ ತನಿಖೆ ನಡೆಸುತ್ತಾರೆ. ನಂತರ ತನಿಖಾ ವರದಿಯನ್ನು ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ನೀಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
’ಕೇವಲ ಒಂದನೇ ತರಗತಿಯ ಪಠ್ಯ ಪುಸ್ತಕಗಳಿಗೆ ಖಾಸಗಿ ಶಾಲೆಯೊಂದು ₹7,000 ದರ ವಿಧಿಸಿರುವುದು ಕಂಡು ಆಶ್ಚರ್ಯವಾಯಿತು. ನಮ್ಮ ಸರ್ಕಾರ ಶಿಕ್ಷಣವನ್ನು ವ್ಯಾಪಾರವಾಗಲು ಬಿಡುವುದಿಲ್ಲ. ಕಾನೂನು ನಿಯಮಗಳಿಗೆ ಒಳಪಟ್ಟಂತೆ ನಾವು ನಿರ್ಧಾರ ಕೈಗೊಂಡಿದ್ದು, ಅದನ್ನು ಮೀರಲು ಬಿಡುವುದಿಲ್ಲ.’ ಎಂದು ಶಿಕ್ಷಣ ಸಚಿವರು ಹೇಳಿದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…