ಬೆಂಗಳೂರು : ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವ ಬಿಜೆಪಿ ಹೈಕಮಾಂಡ್ ಈಗ ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಯನ್ನೂ ಅಂತಿಮಗೊಳಸಿದ್ದು, ಈ ಸಂಬಂಧ ಶುಕ್ರವಾರ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಅಂತಿಮವಾಗಿ ಆರ್.ಅಶೋಕ್ ನೇಮಕಗೊಂಡಿದ್ದಾರೆ.
ವಿಪಕ್ಷ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಖಾಸಗಿ ಹೋಟೆಲ್‌ನಲ್ಲಿ ಪಕ್ಷದ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್‌ಸಿಂಗ್ ಗೌತಮ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ವಿಪಕ್ಷ ನಾಯಕನ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಲು ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ಬಂದಂತೆ ಇದೆ. ವಿಧಾನ ಪರಿಷತ್‌ನಲ್ಲಿ ಒಬಿಸಿ ಇಲ್ಲವೇ ದಲಿತ ನಾಯಕರಿಗೆ ಅವಕಾಶ ಕೊಡುವ ಬಗ್ಗೆ ಚಿಂತನೆ ಮಾಡಲಾಗಿದೆ. ಅಲ್ಲದೆ, ವಿಧಾನಸಭೆಯಲ್ಲಿ ಜೂನಿಯರ್ – ಸೀನಿಯರ್ ಫಾರ್ಮುಲಾವನ್ನು ಅಳೆದು ತೂಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಜ್ಯೂನಿಯರ್ ಕೋಟಾದಲ್ಲಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಈಗ ಈ ಸ್ಥಾನಕ್ಕೆ ಒಕ್ಕಲಿಗ ಸಮುದಾಯದ ಮತ್ತೊಬ್ಬ ಪ್ರಬಲ ನಾಯಕ, ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರನ್ನು ಆಯ್ಕೆ ಮಾಡಿದರೆ ಇಬ್ಬರೂ ಕಿರಿಯರನ್ನು ಆಯ್ಕೆ ಮಾಡಿದಂತೆ ಆಗುತ್ತದೆ. ಇದು ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಬಹುದು ಎಂಬ ಹಿನ್ನೆಲೆಯಲ್ಲಿ ಬಿಜೆಪಿ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ.
ಕೇಶವ್ ಎಂ. ಅರಮನೆಗೆ ೨,೧೯,೯೧೮ ಮಂದಿ, ಮೃಗಾಲಯಕ್ಕೆ ೧.೫೭ ಲಕ್ಷ ಮಂದಿ ಭೇಟಿ ಮೈಸೂರು: ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ…
ಮೈಸೂರು: ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ…
ನವದೆಹಲಿ: ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘೇರ್ ಘಾಲಿಬಾಫ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 26 ಮತ್ತು 27ರಂದು…
ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲದ ಬಳಕೆ ಶೇಕಡಾ 70ರಷ್ಟಾಗಿದ್ದು, ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಕುಡಿಯುವ ನೀರು, ಕೃಷಿ…
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ…