BREAKING NEWS

ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್

ಬೆಂಗಳೂರು : ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿಗಳಲ್ಲಿ ಒಬ್ಬರು ಸ್ವತಃ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್. ಇಷ್ಟು ದಿನ ಎದೆಯ ಒಳಗೆ ಇಟ್ಟುಕೊಂಡಿದ್ದ ಅಪ್ಪುವಿನ ಹೆಸರನ್ನು ಈಗ ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅಗಲಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದ್ದರೂ ಅವರ ಅಗಲಿಕೆಯನ್ನು ಇಂದಿಗೂ ಎಷ್ಟೋ ಜನರಿಗೆ ಅರಗಿಸಿಕೊಳ್ಳಲಾಗಿಲ್ಲ. ಪುನೀತ್ ಅಗಲಿಕೆ ಬಳಿಕ ರಾಜ್ಯದಾದ್ಯಂತ ಬೀದಿ ಬೀದಿಯಲ್ಲಿ ಅವರ ಕಟೌಟ್​ಗಳು ರಾರಾಜಿಸಿವೆ. ಪುತ್ಥಳಿಗಳ ಉದ್ಘಾಟನೆ ಆಗಿದೆ. ಕೆಲವರಂತೂ ದೇವಾಲಯವನ್ನೇ ಕಟ್ಟಿಬಿಟ್ಟಿದ್ದಾರೆ. ಪುನೀತ್ ಅವರ ನೆನಪನ್ನು ತ್ಯಜಿಸಿ ಬಾಳುವುದು ಅವರ ಕೋಟ್ಯಂತರ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಅಂಥಹವರಲ್ಲಿ ಪುನೀತ್ ರಾಜ್​ಕುಮಾರ್ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್ ಸಹ ಒಬ್ಬರು.

ಪುನೀತ್ ರಾಜ್​ಕುಮಾರ್ ಕಾಲವಾಗುವ ವೇಳೆಗೆ ಆರೋಗ್ಯ ಸಮಸ್ಯೆಯಿಂದ ದೈಹಿಕ ಸಾಮರ್ಥ್ಯಗಳನ್ನು ತುಸು ಮಟ್ಟಿಗೆ ಕಳೆದುಕೊಂಡಿದ್ದ ರಾಘವೇಂದ್ರ ರಾಜ್​ಕುಮಾರ್ ಮಾನಸಿಕ ಆರೋಗ್ಯವನ್ನು ಗಟ್ಟಿಯಾಗಿ ಕಾಪಾಡಿಕೊಂಡಿದ್ದರು. ಅಪ್ಪು ಬಗ್ಗೆ ಅಪಾರ ಪ್ರೀತಿ ಗೌರವ ಹೊಂದಿರುವ ರಾಘವೇಂದ್ರ ರಾಜ್​ಕುಮಾರ್, ಅಪ್ಪು ಅಗಲಿಕೆಯಿಂದ ಶೋಕಸಾಗರದಲ್ಲಿ ಮುಳುಗಿದ್ದ ಅವರ ಅಭಿಮಾನಿಗಳಿಗೆ, ಅವರ ಕುಟುಂಬದವರಿಗೆ ಆಪ್ತೇಷ್ಟರಿಗೆ ಸಾಂತ್ವಾನ ಹೇಳು ಕಾರ್ಯ ಮಾಡಿದರು. ಅದಾದ ನಂತರ ಅಪ್ಪು ಅಭಿಮಾನಿಗಳ ಗುಂಪಿನ ನಾಯಕನಂತೆ ಅಭಿಮಾನಿಗಳನ್ನು ಸರಿದಾರಿಯಲ್ಲಿ ನಡೆಸುವ ಯತ್ನವನ್ನು ಮಾಡುತ್ತಿದ್ದಾರೆ.

 ಅಭಿಮಾನಿ ಆಗಿರುವ ರಾಘವೇಂದ್ರ ರಾಜ್​ಕುಮಾರ್, ಪ್ರತಿದಿನವೂ ಅಪ್ಪುವಿನ ಭಾವಚಿತ್ರವನ್ನು ಶರ್ಟ್​ಗೆ ಸಿಕ್ಕಿಸಿಕೊಂಡು ಓಡಾಡುತ್ತಿದ್ದರು. ಯಾವುದೇ ಕಾರ್ಯಕ್ರಮಕ್ಕೆ ಹೋದರು ಎದೆಯ ಮೇಲೆ ಅಪ್ಪು ಚಿತ್ರವೊಂದು ಇದ್ದೇ ಇರುತ್ತಿತ್ತು. ಆದರೆ ಈಗ ರಾಘವೇಂದ್ರ ರಾಜ್​ಕುಮಾರ್ ಅವರು ತಮ್ಮ ಈ ವಯಸ್ಸಿನಲ್ಲಿ, ಆರೋಗ್ಯ ಸಮಸ್ಯೆಗಳ ನಡುವೆ ಸಹೋದರ ಪುನೀತ್ ರಾಜ್​ಕುಮಾರ್ ಹಾಗೂ ಅವರ ಮಕ್ಕಳ ಹೆಸರನ್ನು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ.

ಅಪ್ಪು, ಟೊಟೊ ಮತ್ತು ನುಕ್ಕಿ ಎಂದು ಮೂರು ಹೆಸರುಗಳನ್ನು ರಾಘವೇಂದ್ರ ರಾಜ್​ಕುಮಾರ್ ತಮ್ಮ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿರುವ ರಾಘವೇಂದ್ರ ರಾಜ್​ಕುಮಾರ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತಮಗೆ ಹಚ್ಚೆ ಹಾಕಿದ ಯುವ ಟ್ಯಾಟೂ ಆರ್ಟಿಸ್ಟ್ ಜೊತೆಗೂ ರಾಘವೇಂದ್ರ ರಾಜ್​ಕುಮಾರ್ ಫೊಟೊ ತೆಗೆಸಿಕೊಂಡಿದ್ದಾರೆ. ಈ ವಯಸ್ಸಿನಲ್ಲಿ, ಆರೋಗ್ಯ ಸಮಸ್ಯೆಗಳ ನಡುವೆ ಸಹೋದರ ಹಾಗೂ ಅವರ ಮಕ್ಕಳ ಹೆಸರನ್ನು ಹಚ್ಚೆ ಹಾಕಿಸಿಕೊಂಡ ರಾಘವೇಂದ್ರ ಅವರ ಪ್ರೀತಿಯನ್ನು ಅಪ್ಪು ಅಭಿಮಾನಿಗಳು ಕೊಂಡಾಡಿದ್ದಾರೆ. ಅಂದಹಾಗೆ, ಟೊಟೊ ಹಾಗೂ ನುಕ್ಕಿ ಎಂಬುದು ಅಪ್ಪು ಅವರ ಇಬ್ಬರು ಹೆಣ್ಣು ಮಕ್ಕಳ ನಿಕ್ ನೇಮ್.

ಪುನೀತ್ ರಾಜ್​ಕುಮಾರ್ ಕಾಲವಾದ ಬಳಿಕ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಅಭೂತಪೂರ್ವ ಬೆಂಬಲವನ್ನು ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಮಕ್ಕಳು ನೀಡುತ್ತಿದ್ದಾರೆ. ಅಪ್ಪು ಅವರ ಇಬ್ಬರು ಹೆಣ್ಣು ಮಕ್ಕಳ ಬಗ್ಗೆಯಂತೂ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಮೊದಲಿನಿಂದಲೂ ಬಹಳ ಮಮಕಾರ. ಅಪ್ಪು ಕಾಲವಾದ ಸಂದರ್ಭದಲ್ಲಿ ಅವರ ಮಕ್ಕಳನ್ನು ನೆನೆದು ರಾಘವೇಂದ್ರ ರಾಜ್​ಕುಮಾರ್ ಬಹಳ ದುಖಃ ವ್ಯಕ್ತಪಡಿಸಿದ್ದರು.

lokesh

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

12 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

12 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

13 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

14 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

14 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

14 hours ago