ಈ ಬಾರಿಯ ವಿಶ್ವಕಪ್ ಮುಕ್ತಾಯದ ಜತೆಗೆ ಭಾರತ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಹೆಡ್ ಕೋಚ್ ಅವಧಿಯೂ ಸಹ ಮುಕ್ತಾಯಗೊಂಡಿತ್ತು. ಇನ್ನು ವಿಶ್ವಕಪ್‌ನಲ್ಲಿ ಸೆಮಿಫೈನಲ್‌ವರೆಗಿನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದ ಭಾರತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುವ ಮೂಲಕ ಕಪ್ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿತ್ತು.
ಈ ಸೋಲಿನಿಂದಾಗಿ ರಾಹುಲ್ ದ್ರಾವಿಡ್ ಕೋಚ್ ಆಗಿ ಮುಂದುವರೆಯುವ ನಿರ್ಧಾರದಿಂದ ಹಿಂದೆ ಸರಿಯಲಿದ್ದಾರೆ ಹಾಗೂ ನೂತನ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳೂ ಸಹ ಹರಿದಾಡಿದ್ದವು. ಆದರೆ ಇದೀಗ ಬಿಸಿಸಿಐ ಹೆಡ್ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನೇ ಮುಂದುವರಿಸಲು ನಿರ್ಧರಿಸಿದ್ದು ಹರಿದಾಡಿದ್ದ ಎಲ್ಲಾ ಊಹಾಪೋಹಗಳಿಗೆ ಬ್ರೇಕ್ ಬಿದ್ದಿದೆ.
ಸದ್ಯ ರಾಹುಲ್ ದ್ರಾವಿಡ್ ಹೆಡ್ ಕೋಚ್ ಅವಧಿಯನ್ನು ವಿಸ್ತರಿಸಿರುವ ಬಿಸಿಸಿಐ ಎಲ್ಲಿಯವರೆಗೆ ಈ ವಿಸ್ತರಣೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಆದರೆ ಮುಂಬರುವ ವರ್ಷ ಟಿ 20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಕನಿಷ್ಟ ಅಲ್ಲಿಯವರೆಗಾದರೂ ರಾಹುಲ್ ದ್ರಾವಿಡ್ ತಂಡದ ಕೋಚ್ ಆಗಿ ಮುಂದುವರೆಯುವುದಂತೂ ಖಚಿತ ಎನ್ನಬಹುದು.
2021ರ ನವೆಂಬರ್ ತಿಂಗಳಿನಲ್ಲಿ ಎರಡು ವರ್ಷಗಳ ಅವಧಿಗೆ ಕೋಚ್ ಆಗಿ ನೇಮಕವಾಗಿದ್ದ ರಾಹುಲ್ ದ್ರಾವಿಡ್ ತಂಡವನ್ನು ತಮ್ಮ ಕೋಚಿಂಗ್ ಅಡಿಯಲ್ಲಿ ಎಲ್ಲಾ ಕ್ರಿಕೆಟ್ ಮಾದರಿಯಲ್ಲೂ ಅಗ್ರಸ್ಥಾಕ್ಕೇರಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ಈ ಬಾರಿಯ ವಿಶ್ವಕಪ್‌ನಲ್ಲಿ ತಂಡವನ್ನು ಫೈನಲ್‌ವರೆಗೂ ಕರೆತಂದ ಸಾಧನೆ ಹಾಗೂ ಇದೇ ವರ್ಷ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲಿಸ್ಟ್ ಮಾಡಿದ ಸಾಧನೆ ಸಹ ದ್ರಾವಿಡ್ ಹೆಸರಿನಲ್ಲಿದೆ.
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…
ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…