ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಸಿಡಬ್ಲ್ಯೂಸಿ (ಕಾಂಗ್ರೆಸ್ ಕಾರ್ಯಕಾರಿ ಸಮಿತಿ) ಇಂದು (ಜೂನ್.8) ಅಂಗೀಕರಿಸಿದೆ.
ಲೋಕಸಭಾ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್ ಗಾಂಧಿ ಅವರು ವಹಿಸಿಕೊಳ್ಳುವಂತೆ ಸಿಡಬ್ಲ್ಯೂಸಿ ಮನವಿ ಮಾಡಿದೆ ಅದಕ್ಕೆ ಈ ಸಂಬಂಧ ಯೋಚಿಸಲಾಗುವುದು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
ಲೋಕಸಭಾ ವಿಪಕ್ಷ ನಾಯಕನ ಸ್ಥಾನ ಒಪ್ಪಿಕೊಳ್ಳುವ ಬಗ್ಗೆ ರಾಹುಲ್ ಗಾಂಧಿ ಅವರು ಶೀಘ್ರದಲ್ಲಿಯೇ ತಿಳಿಸಲಿದ್ದಾರೆ. ನಮ್ಮೆಲ್ಲಾ ಕಾರ್ಯಕರ್ತರು, ನಾಯಕರು ಬಹಳ ಉತ್ಸುಹಕತೆಯಿಂದ ಇದ್ದು, ನಾಲ್ಕು ತಿಂಗಳ ಹಿಂದೆ ಇದ್ದ ವಾತಾವರಣ ಈಗ ನಮ್ಮಲ್ಲಿಲ್ಲ ಎಂದು ಹೇಳಿದರು.
ಇನ್ನು ಜೆಡಿಯು ನಾಯಕ ನಿತೀಶ್ ಕುಮಾರ್ ಅವರಿಗೆ ಪ್ರಧಾನಿ ಹುದ್ದೆಯ ಆಫರ್ ಬಂದಿತ್ತು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಷ್ಟೆ ಉತ್ತರ ನೀಡಿದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…