BREAKING NEWS

­ಲೋಕಸಭಾ ವಿರೋಧ ಪಕ್ಷದ ನಾಯಕನಾಗಿ ರಾಹುಲ್‌ ಗಾಂಧಿ ನೇಮಕ!

ನವದೆಹಲಿ: ಲೋಕಸಭಾ ವಿರೋಧ ಪಕ್ಷದ ನಾಯಕ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಸಿಡಬ್ಲ್ಯೂಸಿ (ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ) ಇಂದು (ಜೂನ್‌.8) ಅಂಗೀಕರಿಸಿದೆ.

ಲೋಕಸಭಾ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ರಾಹುಲ್‌ ಗಾಂಧಿ ಅವರು ವಹಿಸಿಕೊಳ್ಳುವಂತೆ ಸಿಡಬ್ಲ್ಯೂಸಿ ಮನವಿ ಮಾಡಿದೆ ಅದಕ್ಕೆ ಈ ಸಂಬಂಧ ಯೋಚಿಸಲಾಗುವುದು ಎಂದು ರಾಹುಲ್‌ ಗಾಂಧಿ ಅವರು ಹೇಳಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.

ಲೋಕಸಭಾ ವಿಪಕ್ಷ ನಾಯಕನ ಸ್ಥಾನ ಒಪ್ಪಿಕೊಳ್ಳುವ ಬಗ್ಗೆ ರಾಹುಲ್‌ ಗಾಂಧಿ ಅವರು ಶೀಘ್ರದಲ್ಲಿಯೇ ತಿಳಿಸಲಿದ್ದಾರೆ. ನಮ್ಮೆಲ್ಲಾ ಕಾರ್ಯಕರ್ತರು, ನಾಯಕರು ಬಹಳ ಉತ್ಸುಹಕತೆಯಿಂದ ಇದ್ದು, ನಾಲ್ಕು ತಿಂಗಳ ಹಿಂದೆ ಇದ್ದ ವಾತಾವರಣ ಈಗ ನಮ್ಮಲ್ಲಿಲ್ಲ ಎಂದು ಹೇಳಿದರು.

ಇನ್ನು ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರಿಗೆ ಪ್ರಧಾನಿ ಹುದ್ದೆಯ ಆಫರ್‌ ಬಂದಿತ್ತು ಎಂಬ ವಿಷಯಕ್ಕೆ ಸಂಬಂಧಿಸಿದಂತೆ ನಮಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಷ್ಟೆ ಉತ್ತರ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

15 hours ago