BREAKING NEWS

ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ: ಬಿಜೆಪಿಯಿಂದ ವಿವಾದಾತ್ಮಕ ಪೋಸ್ಟರ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿ, ನವಯುಗದ ರಾವಣ ಎಂದು ಬಿಜೆಪಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ.

ಈ ವಿವಾದಾತ್ಮಕ ಪೋಸ್ಟರ್‌ನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ (ಟ್ವಿಟ್ಟರ್) ಹಂಚಿಕೊಂಡಿದೆ. ಈ ಟ್ವೀಟ್ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ಯುದ್ಧಕ್ಕೆ ಕಾರಣವಾಗಿದೆ.

ಪೋಸ್ಟರ್‌ನಲ್ಲಿ ಬಿಜೆಪಿ, ರಾವಣ, ಕಾಂಗ್ರೆಸ್ ಪಕ್ಷದ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶನ ಎಂದು ಬರೆದಿದೆ. ಅಲ್ಲದೇಕ ಚಿತ್ರದಲ್ಲಿ ರಾವಣನಂತೆಯೇ ರಾಹುಲ್ ಗಾಂಧಿಯವರಿಗೆ ಬಹು ತಲೆಗಳನ್ನು ಬಿಡಿಸಲಾಗಿದ್ದು, ರಾವಣನಂತೆ ರಕ್ಷಾಕವಚವನ್ನು ಧರಿಸಿರುವುದನ್ನು ತೋರಿಸಲಾಗಿದೆ.

ಇದರ ಜೊತೆ ಹೊಸ ಯುಗದ ರಾವಣ ಬರೆಯಲಾಗಿದೆ. ಅವನು ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ ಮತ್ತು ಅವನ ಗುರಿ ಭಾರತವನ್ನು ನಾಶಮಾಡುವುದು ಎಂದು ಬಿಜೆಪಿ ಬರೆದುಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶದಿಂದ ಬಿಜೆಪಿ ಈ ರೀತಿ ಮಾಡಿದೆ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

38 mins ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

41 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

45 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

49 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

58 mins ago