BREAKING NEWS

ವಯನಾಡ್‌ ಕೈಬಿಟ್ಟು ರಾಯ್‌ಬರೇಲಿ ಆಯ್ದುಕೊಂಡ ರಾಹುಲ್‌ ಗಾಂಧಿ

ನವದೆಹಲಿ: 2019 ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ ಕ್ಷೇತ್ರದಿಂದ ಭರ್ಜರಿ ಗೆಲುವು ದಾಖಲಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೊನೆಗೂ ವಯನಾಡ್‌ ಕೈ ಬಿಟ್ಟಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ವಯನಾಡ್‌ ಹಾಗೂ ರಾಯ್‌ ಬರೇಲಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದ ರಾಹುಲ್‌ ಗಾಂಧಿಗೆ ಒಂದು ಕ್ಷೇತ್ರವನ್ನು ಆಯ್ದುಕೊಳ್ಳುವ ಅವಕಾಶವಿತ್ತು. ಹಾಗಾಗಿ ಅವರು ವಯನಾಡ್‌ ಕ್ಷೇತ್ರ ಕೈಬಿಟ್ಟು ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧೆ ಮಾಡಲಿದ್ದಾರೆ.

ಸೋಮವಾರ (ಜೂನ್‌.17) ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್‌ ಹಾಗೂ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ನಡೆದ ಮಹತ್ವದ ಸಭೆ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್‌ ಗಾಂಧಿ ಕ್ಷೇತ್ರದ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು.

ರಾಗಾ ಅವರು ಯುಪಿಯ ರಾಯ್‌ಬರೇಲಿ ಉಳಿಸಿಕೊಂಡು ವಯನಾಡ್‌ ಕ್ಷೇತ್ರವನ್ನು ವಯನಾಡ್‌ ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ ಎಂದು ಖರ್ಗೆ ಅವರು ಘೋಷಿಸಿದರು.

ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಗಾ 6,87,649 ಮತ ಪಡೆದು 3,90,030 ಮತಗಳ ಅಂತರದಿಂದ ಗೆದ್ದರೆ, ಕೇರಳದ ವಯನಾಡಿನಲ್ಲಿ 6,47,445 ಮತ ಪಡೆದು 3,64,422 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

50 mins ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

2 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

2 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

2 hours ago

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ…

2 hours ago

ಓದುಗರ ಪತ್ರ: ವಾಣಿಜ್ಯ ಸಿಲಿಂಡರ್ ದರ ಏರಿಕೆ ಬರೆ

ಕೇಂದ್ರ ಸರ್ಕಾರವು ವಾಣಿಜ್ಯ ಬಳಕೆ ಸಿಲಿಂಡರ್‌ಗಳ ದರವನ್ನು ಮೇ ೧ರಿಂದ ಒಂದೇ ಬಾರಿಗೆ ೯೯೧ರೂ.ಗಳಿಗೆ ಏರಿಕೆ ಮಾಡಿದ್ದು, ಇದರಿಂದಾಗಿ ಹೋಟೆಲ್‌ಗಳಲ್ಲಿ…

2 hours ago