BREAKING NEWS

ರಾಹುಲ್‌ ಗಾಂಧಿಗೆ 3 ವರ್ಷ ಅವಧಿಗೆ ‘ಸಾಮಾನ್ಯ’ ಪಾಸ್‌ಪೋರ್ಟ್: ದೆಹಲಿ ಕೋರ್ಟ್ ಆದೇಶ

ನವದೆಹಲಿ: ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮೂರು ವರ್ಷಗಳ ಕಾಲ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ)ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ.

ಸಂಸದ ಸ್ಥಾನದಿಂದ ಅನರ್ಹ ಆಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ತಮಗಿದ್ದ ವಿಶೇಷ ಸವಲತ್ತುಗಳನ್ನು ಕಳೆದುಕೊಂಡಿದ್ದಾರೆ.

ರಾಹುಲ್​​​​ ಗಾಂಧಿ ಅವರು ತಮ್ಮ ಅನರ್ಹತೆಯ ನಂತರ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್​​ನ್ನು ಸರ್ಕಾರಕ್ಕೆ ಒಪ್ಪಿಸಿದ ನಂತರ ಅವರು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಗಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ನ್ಯಾಯಲಯಕ್ಕೆ 10 ವರ್ಷಗಳ ಅನುಮತಿ ನೀಡಬೇಕು ಎಂದು ಮನವಿ ಮಾಡಿದ ರಾಹುಲ್​​ , ಇದಕ್ಕೆ ಒಪ್ಪದ ನ್ಯಾಯಲಯ 3 ವರ್ಷಗಳ ಕಾಲ ಅನುಮತಿ ನೀಡಿದೆ.

ರಾಹುಲ್ ಗಾಂಧಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣದ ಆರೋಪಿಯಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣ ಹಾಗೂ ಹಣಕಾಸು ದುರ್ಬಳಕೆ ಆರೋಪಗಳು ರಾಹುಲ್ ಗಾಂಧಿ ಅವರ ಮೇಲಿದೆ. ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ರಾಹುಲ್ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಕೋರಿ ರಾಹುಲ್ ಗಾಂಧಿಯವರ ಮನವಿಗೆ ಶುಕ್ರವಾರದೊಳಗೆ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಬುಧವಾರದಂದು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಸೂಚಿಸಿತ್ತು.

ಶುಕ್ರವಾರದ ವಿಚಾರಣೆ ವೇಳೆ ಮೆಟ್ರೋಪಾಲಿಟನ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಮೂರ್ತಿ ವೈಭವ್ ಮೆಹ್ತಾ ಅವರು ರಾಹುಲ್ ಗಾಂಧಿ ಅವರಿಗೆ ಪ್ರಯಾಣ ಮಾಡುವ ಮೂಲಭೂತ ಹಕ್ಕು ಇದೆ ಎಂದು ಅಭಿಪ್ರಾಯಪಟ್ಟರು. ಇದಕ್ಕೆ ನಾವು ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ್ದಾರೆ.

andolanait

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

40 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

8 hours ago