ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.
ರಾಹುಲ್ ಗಾಂಧಿ ಶನಿವಾರ ಮುಂಜಾನೆ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮವನ್ನು ತಲುಪಿದರು.
‘ಇದೊಂದು ಪೂರ್ವಸಿದ್ಧತೆಯಿಲ್ಲದ ಭೇಟಿ. ಅವರು ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಂವಾದ ನಡೆಸಿದರು. ರಾಹುಲ್ ಜಿ ಭತ್ತ ನಾಟಿ ಕಾರ್ಯದಲ್ಲಿ ಭಾಗವಹಿಸಿದರು ಮತ್ತು ಟ್ರ್ಯಾಕ್ಟರ್ ಓಡಿಸಿದರು’ ಎಂದು ಸೋನಿಪತ್‌ನ ಕಾಂಗ್ರೆಸ್ ಶಾಸಕ ಜಗ್ಬೀರ್ ಸಿಂಗ್ ಮಲಿಕ್ ಪಿಟಿಐಗೆ ಫೋನ್ ಮೂಲಕ ತಿಳಿಸಿದರು.
ಸ್ಥಳದಲ್ಲಿದ್ದ ಮಲಿಕ್, ರಾಹುಲ್ ಗಾಂಧಿ ಬಹುಶಃ ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದರು ಎಂದು ಹೇಳಿದರು.
ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಚಿತ್ರಗಳಲ್ಲಿ, ರಾಹುಲ್ ಗಾಂಧಿಯವರು ಬಿಳಿ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರೂ ಗ್ರಾಮಸ್ಥರೊಂದಿಗೆ ಗದ್ದೆಯಲ್ಲಿಯೇ ಸಂವಾದ ನಡೆಸಿ, ಭತ್ತ ನಾಟಿ ಮಾಡಿದ್ದಾರೆ.
ರಾಹುಲ್ ಗಾಂಧಿಯವರು ‘ಮೋದಿ ಉಪನಾಮ’ ಕುರಿತಾದ ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಈ ಹಿಂದೆ ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಮೇ 23ರಂದು ರಾಹುಲ್ ಗಾಂಧಿಯವರು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…