BREAKING NEWS

ಸೋನಿಪತ್‌ಗೆ ರಾಹುಲ್‌ ಹಠಾತ್ ಭೇಟಿ: ರೈತರೊಂದಿಗೆ ಚರ್ಚೆ ಭತ್ತ ನಾಟಿ ಮಾಡಿ ಟ್ರ್ಯಾಕ್ಟರ್ ಸವಾರಿ!

ಚಂಡೀಗಢ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ಜನರೊಂದಿಗೆ ಸಂವಾದ ನಡೆಸಿದರು ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಮಯ ಕಳೆದರು. ಈ ವೇಳೆ ರೈತ ಮಹಿಳೆಯರೊಂದಿಗೆ ಸೇರಿ ಭತ್ತ ನಾಟಿ ಮಾಡಿದರು ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶನಿವಾರ ಮುಂಜಾನೆ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮವನ್ನು ತಲುಪಿದರು.

‘ಇದೊಂದು ಪೂರ್ವಸಿದ್ಧತೆಯಿಲ್ಲದ ಭೇಟಿ. ಅವರು ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಂವಾದ ನಡೆಸಿದರು. ರಾಹುಲ್‌ ಜಿ ಭತ್ತ ನಾಟಿ ಕಾರ್ಯದಲ್ಲಿ ಭಾಗವಹಿಸಿದರು ಮತ್ತು ಟ್ರ್ಯಾಕ್ಟರ್ ಓಡಿಸಿದರು’ ಎಂದು ಸೋನಿಪತ್‌ನ ಕಾಂಗ್ರೆಸ್ ಶಾಸಕ ಜಗ್ಬೀರ್ ಸಿಂಗ್ ಮಲಿಕ್ ಪಿಟಿಐಗೆ ಫೋನ್ ಮೂಲಕ ತಿಳಿಸಿದರು.

ಸ್ಥಳದಲ್ಲಿದ್ದ ಮಲಿಕ್, ರಾಹುಲ್ ಗಾಂಧಿ ಬಹುಶಃ ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದರು ಎಂದು ಹೇಳಿದರು.

ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಚಿತ್ರಗಳಲ್ಲಿ, ರಾಹುಲ್ ಗಾಂಧಿಯವರು ಬಿಳಿ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರೂ ಗ್ರಾಮಸ್ಥರೊಂದಿಗೆ ಗದ್ದೆಯಲ್ಲಿಯೇ ಸಂವಾದ ನಡೆಸಿ, ಭತ್ತ ನಾಟಿ ಮಾಡಿದ್ದಾರೆ.

ರಾಹುಲ್ ಗಾಂಧಿಯವರು ‘ಮೋದಿ ಉಪನಾಮ’ ಕುರಿತಾದ ಹೇಳಿಕೆಯ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಮನವಿಯನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಹಿಂದೆ ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಮೇ 23ರಂದು ರಾಹುಲ್ ಗಾಂಧಿಯವರು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್‌ನಲ್ಲಿ ಪ್ರಯಾಣಿಸಿದ್ದರು.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

40 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago