Mysore
26
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಭಾರಿ ಮಳೆ ಸಾಧ್ಯತೆ : ಚಾ. ನಗರ, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಮುಂದಿನ 48 ಗಂಟೆಗಳಲ್ಲಿಯೂ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನುಳಿದಂತೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಸಹ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!