Mysore
27
broken clouds

Social Media

ಶನಿವಾರ, 16 ಮೇ 2026
Light
Dark

ರಾಜ್ಯದಲ್ಲಿ ಮಳೆ ಅವಾಂತರ| 21 ಸಾವು, 47ಕ್ಕೂ ಹೆಚ್ಚು ಜಾನುವಾರು ಸಾವು: ರಾಜ್ಯ ಸರ್ಕಾರ

ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ.

ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ಧವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!