Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯದ ವಿವಿಧೆಡೆ 5 ದಿನ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. 25ರಿಂದ ಮಳೆಯ 3 ಪ್ರಮಾಣ ಹೆಚ್ಚಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಭಾನುವಾರ ಉತ್ತರ ಒಳನಾಡಿನ ಬೀದರ್‌, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಬಹುದು. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಶನಿವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಧಾರವಾಡದ ಕುಂದಗೋಳ ಹಾಗೂ ದೊಡ್ಡಬಳ್ಳಾಪುರದಲ್ಲಿ ತಲಾ 3 ಸೆಂ.ಮೀ. ಮಳೆ ಸುರಿದಿದೆ. ಬೆಳಗಾವಿಯ ಕನಬರ್ಗಿ, ಕಲಬುರಗಿ ಜಿಲ್ಲೆಯ ಚಿಂಚೋಳಿ, ತುಮಕೂರು ಜಿಲ್ಲೆಯ ಪಾವಗಡ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಮಗಳೂರು ಜಿಲ್ಲೆಯ ಯಗಟಿ, ಭಾಗಮಂಡಲದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (39.8 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.

ಸಿದ್ದಾಪುರ ಭಾಗದಲ್ಲಿ ಉತ್ತಮ ಮಳೆ : ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಮಳೆಯಾಗಿದೆ. ಸಿದ್ದಾಪುರ, ಪಾಲಿಬೆಟ್ಟ, ಚೆನ್ನಯ್ಯನಕೊಟೆ ನೆಲ್ಯಹುದಿಕೇರಿ, ಗುಹ್ಯ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ.

ಸಿದ್ದಾಪುರ ಭಾಗದಲ್ಲಿ ಮಳೆ ಇಲ್ಲದೆ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ.

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ