ಬೆಂಗಳೂರು : ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಒಣಹವೆ ಇರಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. 25ರಿಂದ ಮಳೆಯ 3 ಪ್ರಮಾಣ ಹೆಚ್ಚಲಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಭಾನುವಾರ ಉತ್ತರ ಒಳನಾಡಿನ ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ಬೆಳಗಾವಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಬಹುದು. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಒಣಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಶನಿವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಧಾರವಾಡದ ಕುಂದಗೋಳ ಹಾಗೂ ದೊಡ್ಡಬಳ್ಳಾಪುರದಲ್ಲಿ ತಲಾ 3 ಸೆಂ.ಮೀ. ಮಳೆ ಸುರಿದಿದೆ. ಬೆಳಗಾವಿಯ ಕನಬರ್ಗಿ, ಕಲಬುರಗಿ ಜಿಲ್ಲೆಯ ಚಿಂಚೋಳಿ, ತುಮಕೂರು ಜಿಲ್ಲೆಯ ಪಾವಗಡ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು, ಚಿಕ್ಕಮಗಳೂರು ಜಿಲ್ಲೆಯ ಯಗಟಿ, ಭಾಗಮಂಡಲದಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (39.8 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.
ಸಿದ್ದಾಪುರ ಭಾಗದಲ್ಲಿ ಉತ್ತಮ ಮಳೆ : ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಮಳೆಯಾಗಿದೆ. ಸಿದ್ದಾಪುರ, ಪಾಲಿಬೆಟ್ಟ, ಚೆನ್ನಯ್ಯನಕೊಟೆ ನೆಲ್ಯಹುದಿಕೇರಿ, ಗುಹ್ಯ ಸೇರಿದಂತೆ ಸುತ್ತಮುತ್ತಲಿನ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ.
ಸಿದ್ದಾಪುರ ಭಾಗದಲ್ಲಿ ಮಳೆ ಇಲ್ಲದೆ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…