ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಚಾಮರಾಜನಗರ, ರಾಮನಗರ, ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಕೋಲಾರದಲ್ಲಿ ಮಳೆಯಾಗಿದ್ದು, ಈ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿರುವ ವರದಿಯಾಗಿದೆ. ಚಾಮರಾಜನಗರದ ಮಂಬಳ್ಳಿ ಗ್ರಾಮದಲ್ಲಿ 81.5 ಮಿಮೀ ಮಳೆಯಾಗಿದ್ದರೆ, ಕುಣಗಳ್ಳಿಯಲ್ಲಿ 64.5 ಮಿಮೀ ಮಳೆಯಾಗಿದೆ. ರಾಮನಗರದ ಕೋಡಿಹಳ್ಳಿಯಲ್ಲಿ 70.5 ಮಿಮೀ ಮಳೆಯಾಗಿರುವ ವರದಿಯಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಹೆಣ್ಣಾಗರದಲ್ಲಿ 67 ಮಿಮೀ ಮಳೆಯಾಗಿದ್ದು, ಥಾರಾಳುವಿನಲ್ಲಿ 64.5 ಮಿಮೀ ಮಳೆಯಾಗಿದೆ. ಇನ್ನು, ಮೈಸೂರಿನಲ್ಲಿ 57 ಮಿಮೀ ಮಳೆಯಾಗಿದ್ದು, ಮಂಡ್ಯದಲ್ಲಿ 45.5 ಮಿಮೀ, ಕೋಲಾರದಲ್ಲಿ 35.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ.
ಬೆಂಗಳೂರಿನಲ್ಲಿ ಧಾರಾಕಾರ ಮಳೆ : ಬೆಂಗಳೂರಿನ ಹಲವೆಡೆ ಸೋಮವಾರ ರಾತ್ರಿ ಧಾರಾಕಾರ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಕೆಆರ್ ಮಾರುಕಟ್ಟೆ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್ ಸೇರಿ ಹಲವು ಕಡೆಗಳಲ್ ಲಿಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು.
ವಿದ್ಯಾರಣ್ಯಪುರ, ನಾಗಸಂದ್ರ, ಯಶವಂತಪುರ, ಜಾಲಹಳ್ಳಿ, ಪೀಣ್ಯ, ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆ ಮತ್ತು ಬಲವಾದ ಗಾಳಿ ಬೀಸಿದೆ. ಈ ನಡುವೆ, ನಗರದಲ್ಲಿ ಇನ್ನೂ ಎರಡು ದಿನ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 7ರವರೆಗೂ ಮಳೆ ಮುನ್ಸೂಚನೆ : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 5ರವರೆಗೆ ದಕ್ಷಿಣ ಒಳನಾಡಿನಲ್ಲಿ, ಏಪ್ರಿಲ್ 6 ಮತ್ತು ಏಪ್ರಿಲ್ 7ರಂದು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…