BREAKING NEWS

ರಾಜಾ ಹುಲಿ ಮೋದಿ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣವಲ್ಲ : ಸಿದ್ದರಾಮಯ್ಯ

ಬೆಂಗಳೂರು : ಪ್ರತಿನಿತ್ಯ ಬೈದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ.ಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಬಿಎಸ್ ವೈ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ (ಟ್ವಿಟ್ಟರ್) ನಲ್ಲಿ ಸರಣಿ ಟ್ವೀಟ್ ಮಾಡಿ, ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ.

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ.

ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ಕರ್ನಾಟಕ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ಪಿಎಂ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಜೆಪಿ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮೊನ್ನೆ ಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ ಎಂದು ಖಾರವಾಗಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ.

ಬಿಪಿಜೆ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸಿದ್ದಾರೆ.

https://x.com/siddaramaiah/status/1720349883725734392?s=20

lokesh

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

5 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

9 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

9 hours ago