ನವದೆಹಲಿ: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಮರಿ ಮೊಮ್ಮಗ ಸಿ.ಆರ್.ಕೇಶವನ್ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.
ಕಳೆದ ಫೆಬ್ರುವರಿ ತಿಂಗಳಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಶನಿವಾರ ಅಧಿಕೃತವಾಗಿ ಬಿಜೆಪಿ ಸೇರಿದ ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ ಕೇಂದ್ರಿತ ನೀತಿಗಳು, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಸುಧಾರಣೆ, ಆರ್ಥಿಕ ಅಭಿವೃದ್ಧಿ ಕಾರ್ಯಸೂಚಿ ನನಗೆ ಇಷ್ಟವಾಗಿದೆ. ದೇಶದ ಆರ್ಥಿಕತೆಯನ್ನು ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಪರಿವರ್ತಿಸಿದ್ದಾರೆ. ಈ ಕಾರಣಗಳಿಗೆ ನಾನು ಬಿಜೆಪಿ ಸೇರಿದ್ದಾನೆ ಎಂದು ಕೇಶವನ್ ಹೇಳಿದ್ದಾರೆ.
ಈ ಹಿಂದೆ ಕೇಶವನ್ ಅವರು ಎರಡು ದಶಕಗಳ ಕಾಲ ತಮಿಳುನಾಡು ಕಾಂಗ್ರೆಸ್ ಘಟಕ ಸೇರಿದಂತೆ ರಾಷ್ಟ್ರೀಯ ಮಟ್ಟದಲ್ಲಿ ಪಕ್ಷಕ್ಕೆ ಕೆಲಸ ಮಾಡಿದ್ದರು.





