ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಚಾಲನೆ ನೀಡಿದ್ದಾರೆ.
ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜಸ್ಥಾನ ವಿಶ್ವವಿದ್ಯಾಲಯದಲ್ಲಿ ಉಚಿತ ತರಬೇತಿ ನೀಡಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ನಡೆಸಲು ಆಸಕ್ತಿ ಹೊಂದಿರುವವರಿಗೆ ಅನುಕೂಲವಾಗಲೇಂದು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.
ರಕ್ಷಾಬಂಧನ ಹಬ್ಬದ ಭಾಗವಾಗಿ 40 ಲಕ್ಷ ಕುಟುಂಬಗಳ ಹೆಣ್ಣು ಮಕ್ಕಳಿಗೆ, ಮೂರು ವರ್ಷಗಳ ಉಚಿತ ಇಂಟರ್ನೆಟ್ ಸೇವೆಯೊಂದಿಗೆ ಮೊಬೈಲ್ ಫೋನ್‌ಗಳನ್ನು ವಿತರಿಸಲಾಗುವುದು ಎಂದು ಗೆಹಲೋತ್ ತಿಳಿಸಿದ್ದಾರೆ.
ಸರ್ಕಾರದ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ. ಗ್ರಾಮೀಣ ಜನರಿಗೆ ಮಾಹಿತಿ ನೀಡುವ ಕೆಲಸ ಎನ್‌ಎಸ್‌ಯುಐ ಮಾಡಬೇಕಾಗಿದೆ ಎಂದು ಕರೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕರಿಗೆ (ಸ್ವಿಗ್ಗಿ, ಜೊಮ್ಯಾಟೊ, ಓಲಾ, ಉಬರ್ ಮುಂತಾದ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ) ಕ್ಷೇಮಾಭಿವೃದ್ಧಿ ನಿಗಮ ಸ್ಥಾಪಿಸಿ,200 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…