BREAKING NEWS

ರಾಜಸ್ಥಾನ| ಐಎಎಸ್, ಆರ್‌ಎಎಸ್‌ಗೆ ಉಚಿತ ತರಬೇತಿ: ಅಶೋಕ್ ಗೆಹಲೋತ್

ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಚಾಲನೆ ನೀಡಿದ್ದಾರೆ.

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜಸ್ಥಾನ ವಿಶ್ವವಿದ್ಯಾಲಯದಲ್ಲಿ ಉಚಿತ ತರಬೇತಿ ನೀಡಲಾಗುವುದು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಾಸ ನಡೆಸಲು ಆಸಕ್ತಿ ಹೊಂದಿರುವವರಿಗೆ ಅನುಕೂಲವಾಗಲೇಂದು ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.

ರಕ್ಷಾಬಂಧನ ಹಬ್ಬದ ಭಾಗವಾಗಿ 40 ಲಕ್ಷ ಕುಟುಂಬಗಳ ಹೆಣ್ಣು ಮಕ್ಕಳಿಗೆ, ಮೂರು ವರ್ಷಗಳ ಉಚಿತ ಇಂಟರ್ನೆಟ್ ಸೇವೆಯೊಂದಿಗೆ ಮೊಬೈಲ್‌ ಫೋನ್‌ಗಳನ್ನು ವಿತರಿಸಲಾಗುವುದು ಎಂದು ಗೆಹಲೋತ್ ತಿಳಿಸಿದ್ದಾರೆ.

ಸರ್ಕಾರದ ಯೋಜನೆಗಳು ಗ್ರಾಮೀಣ ಭಾಗದ ಜನರಿಗೆ ತಲುಪುತ್ತಿಲ್ಲ. ಗ್ರಾಮೀಣ ಜನರಿಗೆ ಮಾಹಿತಿ ನೀಡುವ ಕೆಲಸ ಎನ್‌ಎಸ್‌ಯುಐ ಮಾಡಬೇಕಾಗಿದೆ ಎಂದು ಕರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಮಿಕರಿಗೆ (ಸ್ವಿಗ್ಗಿ, ಜೊಮ್ಯಾಟೊ, ಓಲಾ, ಉಬರ್ ಮುಂತಾದ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ) ಕ್ಷೇಮಾಭಿವೃದ್ಧಿ ನಿಗಮ ಸ್ಥಾಪಿಸಿ,200 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.

andolanait

Recent Posts

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

13 mins ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

2 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

5 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

6 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

6 hours ago