ಬೆಂಗಳೂರು : ಸ್ಯಾಂಡಲ್‌ವುಡ್ ನಟ ಚೇತನ್‌ಚಂದ್ರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ.
ನಟ ಚೇತನ್‌ಚಂದ್ರ ಬೈಕ್‌ನಲ್ಲಿ ತೆರಳುವ ಸಂದರ್ಭದಲ್ಲಿ ಹಿಂಬಾಲಿಸಿಕೊಂಡು ಬಂದ ಗುಂಪೊಂದು ತಮ್ಮ ಬೈಕ್ ಟಚ್ ಮಾಡಿದ್ದೀರಿ ಎಂದು ಗಲಾಟೆ ಪ್ರಾರಂಭಿಸಿದ್ದರು ಎನ್ನಲಾಗಿದೆ.
ಮಾತಿಗೆ ಮಾತು ಬೆಳೆದು ಚೇತನ್ ಚಂದ್ರ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಚೇತನ್ ಚಂದ್ರಗೆ ತೀವ್ರ ರಕ್ತಸ್ರಾವವಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಬಗ್ಗೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಚೇತನ್, ಹಲ್ಲೆಗೊಳಗಾದ ಚಿತ್ರವನ್ನು ತಮ್ಮ ಇಂನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.





