BREAKING NEWS

ರಾಜ್ಯಸಭೆ: ಮುಂಗಾರು ಅಧಿವೇಶನದ ಉಳಿದ ಅವಧಿಗೆ ಎಎಪಿಯ ಸಂಜಯ್ ಸಿಂಗ್ ಅಮಾನತು

ನವದೆಹಲಿ : ‘ಅಶಿಸ್ತಿನ ವರ್ತನೆಗಾಗಿ’ ಮುಂಗಾರು ಅಧಿವೇಶನದ ಉಳಿದ ಅವಧಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಸೋಮವಾರ ಅಮಾನತುಗೊಳಿಸಲಾಗಿದೆ.

ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಿದರು. ಇದನ್ನು ಸದನವು ಧ್ವನಿ ಮತದ ಮೂಲಕ ಅಂಗೀಕರಿಸಿತು.

ನಿರ್ಣಯ ಮಂಡಿಸುವ ಮೊದಲು, ಸಭಾಪತಿ ಜಗದೀಪ್ ಧಂಖರ್ ಅವರು ಅಶಿಸ್ತಿನ ನಡವಳಿಕೆಗಾಗಿ ಸಂಜಯ್ ಸಿಂಗ್ ಅವರನ್ನು ಹೆಸರಿಸಿದರು ಮತ್ತು ಅವರಿಗೆ ಎಚ್ಚರಿಕೆ ನೀಡಿದರು.

ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ, ವಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದ್ದರಿಂದ, ರಾಜ್ಯಸಭೆ ಅಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

ಇದಕ್ಕೂ ಮುನ್ನ, ಮಧ್ಯಾಹ್ನ 12 ಗಂಟೆಗೆ ಸದನದ ಕಲಾಪ ಆರಂಭಗೊಂಡಾಗ ವಿರೋಧ ಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಮಣಿಪುರದ ಕುರಿತು ಸದನದಲ್ಲಿ ಪ್ರಧಾನಿ ಹೇಳಿಕೆ ನೀಡುವಂತೆ ಒತ್ತಾಯಿಸಿದರು.

ಪ್ರತಿಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ನಡೆಸುವುದಾಗಿ ಸಭಾಪತಿ ಘೋಷಿಸಿದರು. ಪ್ರಶ್ನೋತ್ತರ ಅವಧಿಯು ಗದ್ದಲದ ನಡುವೆಯೇ ಕೆಲವು ನಿಮಿಷಗಳ ಕಾಲ ಮುಂದುವರೆಯಿತು. ಈ ವೇಳೆ ಸದನದ ಬಾವಿಗಿಳಿದ ಸಂಜಯ್ ಸಿಂಗ್, ಸಭಾಪತಿಗಳೊಂದಿಗೆ ವಾಗ್ವಾದಕ್ಕಿಳಿದರು.

ಮೊದಲಿಗೆ ಅವರನ್ನು ಅವರ ಆಸನಕ್ಕೆ ಹಿಂತಿರುಗುವಂತೆ ಕೇಳಲಾಯಿತು. ಆದರೆ, ಅವರು ಅದನ್ನು ಕೇಳದಿದ್ದಾಗ, ನೀವು ಪದೇ ಪದೆ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದೀರಿ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದೀರಿ. ನೀವು ಇದೇ ರೀತಿ ಪದೇ ಪದೇ ವರ್ತಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಧಂಖರ್ ಎಚ್ಚರಿಕೆ ನೀಡಿದರು.

ಕೂಡಲೇ, ಗೋಯಲ್ ಅವರು ಎದ್ದುನಿಂತು ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸುವುದಾಗಿ ಹೇಳಿದರು.

‘ಈ ರೀತಿಯ ನಡವಳಿಕೆ ಮತ್ತು ಸದನವನ್ನು ಗೊಂದಲಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಸರ್ಕಾರವು ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸುವ ನಿರ್ಣಯವನ್ನು ಮಂಡಿಸಲು ಬಯಸಿದೆ ಎಂದ ಗೋಯಲ್, ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿಗಳನ್ನು ಒತ್ತಾಯಿಸಿದರು.

ಪೀಠವು ಗೋಯಲ್‌ಗೆ ಅಮಾನತು ನಿರ್ಣಯವನ್ನು ಮಂಡಿಸಲು ಅವಕಾಶ ನೀಡಿತು. ಸದನವು ಕೈ ಎತ್ತುವ ಮೂಲಕ ಮತ್ತು ಧ್ವನಿ ಮತದ ಮೂಲಕ ನಿರ್ಣಯವನ್ನು ಅಂಗೀಕರಿಸಿತು. ನಂತರ, ಸಭಾಪತಿ ಧಂಖರ್, ‘ಸಭಾಪತಿಯ ನಿರ್ದೇಶನಗಳನ್ನು ಪದೇ ಪದೆ ಉಲ್ಲಂಘಿಸಿದ ಸಂಜಯ್ ಸಿಂಗ್ ಅವರನ್ನು ಈ ಅಧಿವೇಶನದ ಸಂಪೂರ್ಣ ಅವಧಿಗೆ ಅಮಾನತುಗೊಳಿಸಲಾಗಿದೆ’ ಎಂದು ಹೇಳಿದರು.

ಸದನವನ್ನು ಮುಂದೂಡಿದ ಕೂಡಲೇ, ಗೋಯಲ್ ಸಭಾಪತಿಯವರ ಕೊಠಡಿಗೆ ಹೋದರು ಮತ್ತು ಅನೇಕ ವಿರೋಧ ಪಕ್ಷಗಳ ನಾಯಕರು ಅವರನ್ನು ಹಿಂಬಾಲಿಸಿದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

19 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago