ಬೆಂಗಳೂರು: ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಮತದಾನ ಅಂತ್ಯಗೊಂಡಿದೆ. ಇಂದು ( ಫೆಬ್ರವರಿ 27 ) ವಿಧಾನಸೌಧದ 106ನೇ ಕೊಠಡಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದ್ದು, ಒಟ್ಟು ಶೇ. 99.5ರಷ್ಟು ಮತದಾನ ನಡೆದಿದೆ.
ಒಟ್ಟು 223 ಶಾಸಕರ ಪೈಕಿ 222 ಶಾಸಕರು ಮತದಾನ ಮಾಡಿದ್ದಾರೆ. ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾದರೆ, ಬಿಜೆಪಿಯ ಮತ್ತೋರ್ವ ಶಾಸಕ ಎಸ್. ಟಿ. ಸೋಮಶೇಖರ್ ಕಾಂಗ್ರೆಸ್‌ಗೆ ಅಡ್ಡ ಮತದಾನ ಮಾಡಿದ್ದಾರೆ.
ಕಾಂಗ್ರೆಸ್‌ನ 135 ಶಾಸಕರು, ಬಿಜೆಪಿಯ 65 ಶಾಸಕರು, ಮೂವರು ಪಕ್ಷೇತರ ಶಾಸಕರು ಹಾಗೂ ಜೆಡಿಎಸ್‌ನ 19 ಶಾಸಕರು ಮತದಾನ ಮಾಡಿದ್ದಾರೆ. ಇನ್ನು ಬಿಜೆಪಿಯ ಓರ್ವ ಶಾಸಕ ಕಾಂಗ್ರೆಸ್‌ಗೆ ಮತ ಹಾಕಿರುವುದು ಹಾಗೂ ಓರ್ವ ಶಾಸಕ ಗೈರಾಗಿರುವುದು ಪಕ್ಷಕ್ಕೆ ಹಿನ್ನಡೆಯನ್ನುಂಟುಮಾಡಿದೆ.