BREAKING NEWS

ರಾಖಿ ಸಾವಂತ್‌ಗೆ ಬಲವಂತದ ಚುಂಬನ: ಗಾಯಕ ಮಿಕಾ ಸಿಂಗ್ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್‌ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು ಸಿಂಗ್ ಅವರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗಿದೆ ಎಂಬ ರಾಖಿ ಸಾವಂತ್ ಅವರ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಕರಣದಲ್ಲಿ ಸಲ್ಲಿಸಲಾದ ಎಫ್‌ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ.

2006ರ ಜೂನ್ 11ರಂದು ಮುಂಬೈನ ರೆಸ್ಟೋರೆಂಟ್‌ನಲ್ಲಿ ರಾಖಿ ಸಾವಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮಿಕಾ ಸಿಂಗ್ ಬಲವಂತವಾಗಿ ಚುಂಬಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿತ್ತು.
ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 (ದೌರ್ಜನ್ಯ) ಮತ್ತು 323 (ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಂಗ್ ಈ ವರ್ಷದ ಏಪ್ರಿಲ್‌ನಲ್ಲಿ, ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ನಂತರದ ಆರೋಪಪಟ್ಟಿಯನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ರಾಖಿ ಸಾವಂತ್ ಅವರು ಸಲ್ಲಿಸಿದ ಅಫಿಡವಿಟ್ ಅನ್ನು ಹೈಕೋರ್ಟ್ ಗುರುವಾರ ಪರಿಶೀಲಿಸಿತು. ಅದರಲ್ಲಿ ಅವರು ‘ನಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಂಡಿದ್ದೇವೆ ಮತ್ತು ನಮ್ಮ ಕಡೆಯಿಂದ ತಪ್ಪು ತಿಳುವಳಿಕೆ ಮತ್ತು ತಪ್ಪುಗ್ರಹಿಕೆಯಿಂದ ಇಡೀ ವಿವಾದ ಉದ್ಭವಿಸಿದೆ ಎಂಬುದನ್ನು ಅರಿತುಕೊಂಡಿರುವುದಾಗಿ’ ತಿಳಿಸಿದ್ದರು.

ನಂತರ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್ ಅನ್ನು ಹೈಕೋರ್ಟ್ ರದ್ದುಗೊಳಿಸಿತು.

andolanait

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

10 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago