ನಟ ರಾಮ್ ಚರಣ್ ಅವರು ಈಗ ನಟನೆಯ ಜೊತೆಗೆ ಸಿನಿಮಾ ನಿರ್ಮಾಣದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ವೀರ ಸಾವರ್ಕರ್ 140ನೇ ಜನ್ಮದಿನದ ಪ್ರಯುಕ್ತ ರಾಮ್ ಚರಣ್ ನಿರ್ಮಾಣದ ಹೊಸ ಸಿನಿಮಾ ಘೋಷಣೆ ಆಗಿದೆ. ‘ದಿ ಕಾಶ್ಮಿರ್ ಫೈಲ್ಸ್’ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ನಿರ್ಮಾಣದಲ್ಲಿ ಜೊತೆಯಾಗಿದ್ದಾರೆ. ಈ ಚಿತ್ರಕ್ಕೆ ‘ದಿ ಇಂಡಿಯಾ ಹೌಸ್’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ನಿಖಿಲ್ ಸಿದ್ದಾರ್ಥ್ ಹೀರೋ ಆಗಿದ್ದು, ವೀರ ಸಾವರ್ಕರ್ ಕುರಿತು ಈ ಸಿನಿಮಾ ಇರಲಿದೆ.
ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ವೀರ ಸಾವರ್ಕರ್ ಕೊಡುಗೆಯೂ ಇದೆ. ಅವರ ಹೋರಾಟಗಳ ಮೇಲೆ ಈ ಸಿನಿಮಾ ಬೆಳಕು ಚೆಲ್ಲಲಿದೆ. ನಿಖಿಲ್ ಸಿದ್ದಾರ್ಥ್ ಜೊತೆ ಅನುಪಮ್ ಖೇರ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಸಾವರ್ಕರ್ ಅವರು 1906-1910ರವರೆಗೆ ಲಂಡನ್ನಲ್ಲಿರುವ ಇಂಡಿಯಾ ಹೌಸ್ನಲ್ಲಿ ವಾಸವಾಗಿದ್ದರು. ಅಂದಿನ ಸಮಯದಲ್ಲಿ ಈ ಜಾಗ ಬಹಳ ಮಹತ್ವ ಪಡೆದುಕೊಂಡಿತ್ತು. ಬ್ರಿಟಿಷರ ವಿರುದ್ಧ ಹೋರಾಡಲು ಈ ಜಾಗದಲ್ಲಿ ತಂತ್ರಗಳನ್ನು ರೂಪಿಸಲಾಗುತ್ತಿತ್ತು. ಈ ಕಾರಣಕ್ಕೆ ಸಿನಿಮಾಗೆ ‘ದಿ ಇಂಡಿಯಾ ಹೌಸ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈಗ ರಾಮ್ ಚರಣ್ ಈ ಸಿನಿಮಾ ನಿರ್ಮಾಣ ಮಾಡುತ್ತಿರುವ ಬಗ್ಗೆ ಒಂದಷ್ಟು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ.
ಅಭಿಷೇಕ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಬಿಜೆಪಿಗರ ಬೆಂಬಲ ಇತ್ತು ಅನ್ನೋದು ಒಂದಷ್ಟು ಮಂದಿಯ ಆರೋಪ. ಈಗ ‘ದಿ ಇಂಡಿಯಾ ಹೌಸ್’ ಚಿತ್ರಕ್ಕೂ ಇದೇ ರೀತಿಯ ಆರೋಪ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಸಿನಿಮಾಗೆ ಮತ್ತಷ್ಟು ವಿರೋಧ ವ್ಯಕ್ತವಾದರೂ ಅಚ್ಚರಿ ಏನಿಲ್ಲ.
ಅಭಿಷೇಕ್ ಅಗರ್ವಾಲ್ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಆದರೆ, ಇದಕ್ಕೆಲ್ಲ ಅಭಿಷೇಕ್ ತಲೆಕೆಡಿಸಿಕೊಂಡಿಲ್ಲ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಕಮಾಯಿ ಮಾಡಿತು. ಸದಾ ವಿವಾದದಿಂದ ದೂರ ಉಳಿಯ ಬಯಸುವ ರಾಮ್ ಚರಣ್ ಇದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
https://twitter.com/AlwaysRamCharan/status/1662695713049022464?s=20
ವಾಣಿವಿಲಾಸ ಮಾರುಕಟ್ಟೆ ಒಳಗಿನ ಶೌಚಾಲಯದ ದುಸ್ಥಿತಿ; ಬಹುತೇಕ ಶೌಚಾಲಯಗಳಲ್ಲೂ ಇದೇ ಸ್ಥಿತಿ ಹೆಚ್. ಎಸ್. ದಿನೇಶ್ ಕುಮಾರ್ ಮೈಸೂರು: ದೇಶದ…
ಕೆ. ಬಿ. ರಮೇಶನಾಯಕ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದಲ್ಲಿ ೫೦:೫೦ ಅನುಪಾತದಡಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿ ರುವ ಹಗರಣ ಕುರಿತು…
ದೊಡ್ಡಕವಲಂದೆ: 3 ವರ್ಷಗಳಾದರೂ ನಿರ್ಮಾಣವಾಗದ ಶೌಚಾಲಯ; ಗುತ್ತಿಗೆದಾರ ನಾಪತ್ತೆ ಶ್ರೀಧರ್ ಆರ್. ಭಟ್ ನಂಜನಗೂಡು: ಸ್ವಚ್ಛತೆಗಾಗಿ ಕೇಂದ್ರ ಮತ್ತು ರಾಜ್ಯ…
ಬಿ. ಆರ್. ಜೋಯಪ್ಪ ಕೊಡಗಿನಲ್ಲಿ ಸ್ಥಳೀಯರು ‘ಕಾಡುಪಾಪ’ವನ್ನು ‘ಚೀಂಗೆ ಕೋಳಿ’ ಎಂದು ಕರೆಯುತ್ತಾರೆ. ಇದೊಂದು ನಿಶಾಚರಿ, ನಿರುಪದ್ರವಿ ಕಾಡಿನ ಜೀವಿ.…
ಚಾಮರಾಜನಗರ ನೆಲದ ಕಲಾವಿದರು, ಅಲ್ಲಿನ ಆಡುಭಾಷೆಯನ್ನೇ ಜೀವಾಳವಾಗಿಸಿಕೊಂಡು ಗೆದ್ದ ಅನ್ನ ಚಲನಚಿತ್ರ ರಶ್ಮಿ ಕೋಟಿ ಮನೆಗೆ ಕರೆದುಕೊಂಡು ಹೋಗಲು ಬಂದ…
ತುಳುನಾಡಿನಲ್ಲಿ ಹುಟ್ಟಿ ಬೆಳೆದ ಎಚ್. ನಾಗವೇಣಿಯವರ ಕತೆಗಳಲ್ಲಿ ಕೂಡ ಈ ತಾಯ್ನೆಲದ ಮಣ್ಣಿನ ತುಡಿತ ಮಿಡಿತಗಳು ನರನಾಡಿಯಂತೆ ವ್ಯಾಪಿಸಿರುತ್ತವೆ. ಆ…