BREAKING NEWS

ರಾಮಚಂದ್ರನ್‌ ವಿಶ್ವನಾಥನ್‌ ದೇಶಭ್ರಷ್ಟ ಆರ್ಥಿಕ ಅಪರಾಧಿ: ಸಿಬಿಐ ವಿಶೇಷ ನ್ಯಾಯಾಲಯ

ಬೆಂಗಳೂರು: ದೇವಾಸ್‌ ಮಲ್ಟಿಮೀಡಿಯಾ ಪ್ರೈ.ಲಿ.ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಮಚಂದ್ರನ್‌ ವಿಶ್ವನಾಥನ್‌ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ.

ಸೆಕ್ಷನ್‌ 12(2)ರ ಅಡಿ ರಾಮಚಂದ್ರನ್‌ ಆಸ್ತಿ ಜಪ್ತಿ ಮಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ಜೂ.26ಕ್ಕೆ ನ್ಯಾಯಾಲಯ ಮುಂದೂಡಿದೆ. ಜಾರಿ ನಿರ್ದೇಶಾಲಯ (ಇಡಿ) ಪರವಾಗಿ ಎಸ್‌ಪಿಪಿ ಪಿ. ಪ್ರಸನ್ನ ಕುಮಾರ್‌ ವಾದ ಮಂಡಿಸಿದ್ದಾರೆ.

ಏನಿದು ಪ್ರಕರಣ ?: 2004ರಲ್ಲಿ ರಾಮ ಚಂದ್ರನ್‌ ವಿಶ್ವನಾಥನ್‌ ಬೆಂಗಳೂರಿನಲ್ಲಿ ಉಪಗ್ರಹ ಆಧಾರಿತ ದೇವಾಸ್‌ ಮಲ್ಟಿ ಮೀಡಿಯಾ ಸೇವೆಗಳ ಕಂಪನಿ ಪ್ರಾರಂಭಿಸಿದ್ದರು. ಈ ಕಂಪನಿ ಭಾರತೀಯ ಮೊಬೈಲ್‌ ಬಳಕೆದಾರರಿಗೆ ಎಸ್‌-ಬ್ಯಾಂಡ್‌ ಟ್ರಾನ್ಸ್ಟಾಂಡರ್ಸ್ ಸಂವಹನ ಉಪಗ್ರಹದ‌ ಮೂಲಕ ಮಲ್ಟಿಮೀಡಿಯಾ ಸೇವೆ ನೀಡಲು ಮುಂದಾಗಿತ್ತು. ಆಂತರಿಕ್ಷ್ ಕಾರ್ಪೊರೇಶನ್‌ ಜೊತೆ ಉಪಗ್ರಹ ನಿರ್ಮಿಸಬೇಕಾದ ಒಪ್ಪಂದ ಮಾಡಲಾಗಿತ್ತು. ದೇವಾಸ್‌ ಹಾಗೂ ಆಂತರಿಕ್ಸ್ ಒಡಂಬಡಿಕೆಯಲ್ಲಿ ಭ್ರಷ್ಟಾಚಾರ ನಡೆದಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿ ಆಗಿರುವ ರಾಮಚಂದ್ರನ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸಿತ್ತು. ‌

ಆದರೆ, ರಾಮಚಂದ್ರನ್‌ ವಿಶ್ವನಾಥನ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ರಾಮಚಂದ್ರನ್‌ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲು ಇಡಿ ಅಧಿಕಾರಿಗಳು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ರಾಮಚಂದ್ರನ್‌ ವಿಶ್ವನಾಥನ್‌ರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಅಮೆರಿಕದ ನಿವಾಸಿಯಾಗಿರುವ ರಾಮಚಂದ್ರನ್‌ ಭಾರತ ಮೂಲದವರಾಗಿದ್ದು, ಈಗಾಗಲೇ ದೇಶ ಬಿಟ್ಟು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

andolanait

Recent Posts

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

1 hour ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

2 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

3 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

4 hours ago