ನಟ ಚೇತನ್ ಅಹಿಂಸಾ ಇದೀಗ ರಾಮನ ಬಗ್ಗೆ ಮಾತನಾಡುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎನ್ನುವ ಮೂಲಕ ಮತ್ತೊಂದು ವಿವಾದ ಮಾಡಿಕೊಂಡಿದ್ದಾರೆ.
ನ್ಯಾಷನಲ್ ಟಿವಿ ಎನ್ನುವ ಯೂಟ್ಯೂಬ್ ಚಾನಲ್ ಜೊತೆ ಮಾತನಾಡಿರುವ ಚೇತನ್ ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎಂದಿದ್ದಾರೆ. ‘ಸಾರ್ವಕರ್ ಹೇಳುವಂತೆ ರಾಮ, ರಾವಣನನ್ನು ಸಾಯಿಸಿ ಅಯೋಧ್ಯೆಗೆ ಬಂದು ದೇಶ ಶುರುವಾಯಿತು ಎನ್ನುವುದನ್ನು ಒಪ್ಪುವುದಿಲ್ಲ. ಅದು ಸುಳ್ಳು. ಅದು ಅವರ ಅಭಿಪ್ರಾಯ ಇರಬಹುದು. ನಮ್ಮ ಪ್ರಕಾರ ಸುಳ್ಳು.
ಅದೇ ರೀತಿ 1992 ಹಿಂದುತ್ವಕ್ಕೆ ಬಹಳ ದೊಡ್ಡ ಘಟನೆ. ಆಗ ರಾಮಜನ್ಮಭೂಮಿ ಆಗುತ್ತದೆ. ರಾಮ ಜನ್ಮಭೂಮಿ ಆದಾಗ ಬಾಬ್ರಿ ಮಸೀದಿ ಒಡೆದು ಹಾಕುತ್ತಾರೆ. ರಾಮಜನ್ಮಭೂಮಿ ಎನ್ನುವ ಕಾನ್ಸೆಪ್ಟ್ ಅವೈಜ್ಞಾನಿಕ. ರಾಮ ಅನ್ನೋದು ಕಾಲ್ಪನಿಕ ವ್ಯಕ್ತಿ. ನಂಬಿಕೆ ಇರಬಹುದು. ಸಾರ್ವಕರ್ ರಾಮ ಬೇರೆ, ಗಾಂಧೀ ರಾಮ ಬೇರೆ, ರಾಮಾಯಣದ ರಾಮ ಬೇರೆ’ ಎಂದು ಹೇಳಿದರು.
ಇತ್ತೀಚೆಗಷ್ಟೆ ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಾರಣ ನಟ ಚೇತನ್ ಅಹಿಂಸಾರನ್ನು ಬಂಧಿಸಲಾಗಿತ್ತು. “ಹಿಂದುತ್ವವನ್ನು ಸುಳ್ಳಿನ ಅಧಾರದ ಮೇಲೆ ಕಟ್ಟಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಜೈಲಿನಿಂದ ಬಂದ ಬಳಿಕವೂ ಚೇತನ್ ಹೆಚ್ಚಿನ ಹೋರಾಟ ಮಾಡುವುದಾಗಿ ಹೇಳಿದ್ದರು.
ಇದಾದ ಬಳಿಕ ಚೇತನ್ ಅಹಿಂಸಾ ಅವರ ಸಾಗರೋತ್ತರ ವೀಸಾವನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಎಲ್ಲಾ ಘಟನೆಗಳ ಬಳಿಕವೂ ಚೇತನ್ ಇದೀಗ ರಾಮ ಬಗ್ಗೆ ನೀಡಿ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…