ಇಂದು ಮತ್ತೆ ಮುಂಬೈಗೆ ಶಾಸಕ ರಮೇಶ್‌ ಜಾರಕಿಹೊಳಿ

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಸಂಜೆ ಮತ್ತೆ ಮುಂಬೈಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಸಂಜೆ ಬೆಳಗಾವಿ ಸಾಂಬ್ರಾ ಏರ್​ಪೋರ್ಟ್​ನಿಂದ ಮುಂಬೈಗೆ ಕೆಲ ಆಪ್ತರ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಬೆಳಿಗ್ಗೆ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿ, ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ದೇವೇಂದ್ರ ಫಡ್ನವಿಸ್, ರಮೇಶ್ ಜಾರಕಿಹೊಳಿಗೆ ಬಿಜೆಪಿ ಸೇರ್ಪಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರುವ ರಮೇಶ್ ಜಾರಕಿಹೊಳಿಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ಫಡ್ನವಿಸ್ ಸಲಹೆ ನೀಡಿದ್ದಾರೆ. ನಾಳೆ ದೇವೇಂದ್ರ ಫಡ್ನವಿಸ್ ಭೇಟಿ ಬಳಿಕ ದೆಹಲಿಗೆ ತೆರಳಿ, ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಯಿದೆ.

× Chat with us