ಮೈಸೂರು : ಇಂದು ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್ ಹಿಂದೆ ಇರುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ನನಗೆ ಬಂದಿರುವ ಮಾಹಿತಿಗಳ ಪ್ರಕಾರ, ನೆನ್ನೆ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಕೆಫೆ ಬಳಿ ಒಂದು ಬ್ಯಾಗ್ ಒಂದನ್ನು ಇಟ್ಟು ಹೋಗಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ, ಕೆಫೆ ಹಗೂ ಸುತ್ತ-ಮುತ್ತಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿಸಿದರು.
ಈಗಾಗಲೇ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಎಲ್ಲಾ ರೀತಿಯ ತನಿಖೆಗಳನ್ನು ಕೈಗೊಂಡಿದ್ದಾರೆ. ಸ್ಥಳಕ್ಕೆ ಗೃಹ ಸಚಿವರನ್ನು ಹೋಗಲು ತಿಳಿಸಿದೇನೆ ಎಂದರು.
ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದು, ಆದಷ್ಟು ಬೇಗ ಈ ಕೃತ್ಯದ ಹಿಂದಿನ ಸತ್ಯ ಹೊರ ಬರಲಿದೆ ಎಂದರು.
ಈ ವಿಚಾರದಲ್ಲಿ ರಾಜಕೀಯ ಬೇಡ : ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ವಿಚಾರವಲ್ಲ. ಸ್ಪೋಟಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುವ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು ಎಂದು ತಿಳಿಸಿದರು.