BREAKING NEWS

ʼರಾಮೇಶ್ವರಂʼ ಬ್ಲಾಸ್ಟ್‌ – ವ್ಯಕ್ತಿಯೊಬ್ಬ ಬ್ಯಾಗ್‌ ಇಟ್ಟು ಹೋಗಿರುವ ಮಾಹಿತಿ ತಿಳಿದು ಬಂದಿದೆ : ಸಿದ್ದರಾಮಯ್ಯ !

ಮೈಸೂರು : ಇಂದು ಮಧ್ಯಾಹ್ನ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್‌ ಹಿಂದೆ ಇರುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ನನಗೆ ಬಂದಿರುವ ಮಾಹಿತಿಗಳ ಪ್ರಕಾರ, ನೆನ್ನೆ ರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಕೆಫೆ ಬಳಿ ಒಂದು ಬ್ಯಾಗ್‌ ಒಂದನ್ನು ಇಟ್ಟು ಹೋಗಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ, ಕೆಫೆ ಹಗೂ ಸುತ್ತ-ಮುತ್ತಲಿನ  ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ತಿಳಿಸಿದರು.

ಈಗಾಗಲೇ ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಎಲ್ಲಾ ರೀತಿಯ ತನಿಖೆಗಳನ್ನು ಕೈಗೊಂಡಿದ್ದಾರೆ. ಸ್ಥಳಕ್ಕೆ ಗೃಹ ಸಚಿವರನ್ನು ಹೋಗಲು ತಿಳಿಸಿದೇನೆ ಎಂದರು.

ಸಿಸಿಟಿವಿಯಲ್ಲಿ ಸೆರೆಯಾಗಿರುವ ವ್ಯಕ್ತಿಯನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದು, ಆದಷ್ಟು ಬೇಗ ಈ ಕೃತ್ಯದ ಹಿಂದಿನ ಸತ್ಯ ಹೊರ ಬರಲಿದೆ ಎಂದರು.

ಈ ವಿಚಾರದಲ್ಲಿ ರಾಜಕೀಯ ಬೇಡ : ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ವಿಚಾರವಲ್ಲ. ಸ್ಪೋಟಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುವ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು ಎಂದು ತಿಳಿಸಿದರು.

andolana

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

10 mins ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

32 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

1 hour ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago