ಜಾರ್ಖಂಡ್ : ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್ ನ ಜೆಮ್ಶೆಡ್ಪುರದಲ್ಲಿ ನಡೆದಿರುವುದು ವರದಿಯಾಗಿದೆ.
ಶನಿವಾರ ರಾತ್ರಿಯಿಂದಲೇ ಜೆಮ್ಶೆಡ್ಪುರದ ಶಾಸ್ತ್ರಿನಗರದಲ್ಲಿ ಘರ್ಷಣೆ ಉಂಟಾಗಿದೆ. ರಾಮನವಮಿಯ ಧ್ವಜಕ್ಕೆ ಮಾಂಸದ ತುಂಡು ಕಟ್ಟಿರುವುದನ್ನು ಸ್ಥಳೀಯ ಸಂಘಟನೆಯೊಂದು ನೋಡಿದೆ. ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ, ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಘರ್ಷಣೆ ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳು ಬ್ಯಾಟ್ ಹಿಡಿದು ಬಂದು, ಇಟ್ಟಿಗೆ ಎಸೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಎರಡು ಅಂಗಡಿ ಹಾಗೂ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದಾರೆ.ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು, ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಶಾಸ್ತ್ರಿನಗರದಲ್ಲಿ ಸಾಕಷ್ಟು ಪೊಲೀಸ್ ಪಡೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಶಾಸ್ತ್ರಿನಗರ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್ಹೌಸ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…