ಬೆಂಗಳೂರು : ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ವೆಸಗಿರು ಘಟನೆ ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ.
ಗುಂಜೂರಿನ ಪ್ರತಿಷ್ಠಿತ ಖಾಸಗಿ ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ಲ್ಯಾಬರ್ಡ್ ಪುಷ್ಪರಾಜ್ ನನ್ನು ಪೋಕ್ಸೋ ಕಾಯ್ದೆಯಡಿ ಬಂಸಲಾಗಿದೆ.
ನರ ದೌರ್ಬಲ್ಯದ 10 ವರ್ಷದ ವಿದ್ಯಾರ್ಥಿನಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ನಿನ್ನೆ ಬೆಳಗ್ಗೆ ಎಂದಿನಂತೆ 8.30ರ ಸುಮಾರಿಗೆ ಶಾಲೆಗೆ ಹೋದಾಗ ಆರೋಪಿ ಪ್ರಾಂಶುಪಾಲ ಖಾಲಿ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ನಂತರ ಆಕೆಗೆ ಕೇಕ್ ತಿನ್ನಿಸಿದ್ದಾನೆ.
ಮಧ್ಯಾಹ್ನ ಶಾಲೆ ಮುಗಿಸಿಕೊಂಡು 3.30ರ ಸುಮಾರಿಗೆ ವಿದ್ಯಾರ್ಥಿನಿ ಮನೆಗೆ ಹೋದಾಗ ಹೊಟ್ಟೆನೋವು ಕಾಣಿಸಿಕೊಂಡಿದ್ದು ತಾಯಿಗೆ ಹೇಳಿದ್ದಾಳೆ. ತಾಯಿ ಸ್ನಾನ ಮಾಡಿಸಿದ್ದಾಗ ವಿಷಯ ತಿಳಿದು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಘಟನೆಯನ್ನು ತಿಳಿಸಿದ್ದಾಳೆ.
ತಕ್ಷಣ ಮಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿನಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…