Mysore
28
overcast clouds

Social Media

ಮಂಗಳವಾರ, 21 ಜನವರಿ 2025
Light
Dark

ಶಿಕ್ಷಕರ ದಿನದಂದು 75 ಶಿಕ್ಷಕರಿಗೆ ರಾಷ್ಟ್ರಪತಿ ಮುರ್ಮು ಪ್ರಶಸ್ತಿ ಪ್ರದಾನ

ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು 2023 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು ದೇಶದ 75 ಆಯ್ದ ಪ್ರಶಸ್ತಿ ಪುರಸ್ಕೃತರಿಗೆ ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರದಾನ ಮಾಡಲಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಪ್ರತಿ ವರ್ಷ, ಭಾರತವು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5 ನ್ನು ರಾಷ್ಟ್ರೀಯ ಶಿಕ್ಷಕರ ದಿನವನ್ನಾಗಿ ಆಚರಿಸುತ್ತದೆ.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯ ಉದ್ದೇಶವು ದೇಶದಲ್ಲಿ ಶಿಕ್ಷಕರ ಅನನ್ಯ ಕೊಡುಗೆಯನ್ನು ಕೊಂಡಾಡುವುದು ಮತ್ತು ತಮ್ಮ ಬದ್ಧತೆ ಮತ್ತು ಸಮರ್ಪಣೆಯ ಮೂಲಕ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮಾತ್ರವಲ್ಲದೆ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿದ ಶಿಕ್ಷಕರನ್ನು ಗೌರವಿಸುವುದಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ