ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.
ಸೆಪ್ಟೆಂಬರ್ 3೦ರ ವರೆಗೆ 2,೦೦೦ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.
ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ ಎಂದಿರುವ ಆರ್‌ಬಿಐ, 2೦೦೦ ರೂಪಾಯಿ ನೋಟ್‌ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 2೦ ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 5೦೦ ಮತ್ತು 1,೦೦೦ ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು.
ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕೆ (ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.
ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 5೦೦ರ ನೋಟು ಮತ್ತು 2,೦೦೦ ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್‌ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…