ಚೆನ್ನೈ: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯಿಂದ ತೀವ್ರ ವಿರೋಧ ಎದುರಿಸುತ್ತಿರುವ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಬಿಜೆಪಿ ನಾಯಕರು ತಮ್ಮ ಹೇಳಿಕೆಗಳನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ಸಂಬಂಧ ದಾಖಲಿಸುವ ಎಲ್ಲಾ ಪ್ರಕರಣಗಳನ್ನು ಕಾನೂನುಬದ್ಧವಾಗಿ ಎದುರಿಸಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಉದಯನಿಧಿ, “ಜಗತ್ತನ್ನೇ ತಿರುಗುವ ಪ್ರಧಾನಿ ಮೋದಿಗೆ ಮಣಿಪುರ ಹಿಂಸಾಚಾರದ ಬಗ್ಗೆ ಪ್ರಶ್ನೆಗಳನ್ನು ಎದುರಿಸಲು ಭಯ ಏಕೆ?” ಎಂದು ಪ್ರಶ್ನಿಸಿದ್ದಾರೆ.
“ಕಳೆದ 9 ವರ್ಷಗಳಿಂದ ನೀಡಿರುವ ನಿಮ್ಮ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ, ನಮ್ಮ ಕಲ್ಯಾಣಕ್ಕಾಗಿ ನೀವು ಏನು ಮಾಡಿದ್ದೀರಿ ಎಂಬುದು ಫ್ಯಾಸಿಸ್ಟ್ ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶವು ಒಗ್ಗಟ್ಟಿನಿಂದ ಎತ್ತುತ್ತಿರುವ ಪ್ರಶ್ನೆಯಾಗಿದೆ. ಬಿಜೆಪಿ ನಾಯಕರು ನನ್ನ ಭಾಷಣವನ್ನು ‘ಜನಾಂಗೀಯ ಹತ್ಯೆಗೆ ಪ್ರಚೋದನೆ’ ಎಂದು ತಿರುಚಿದ್ದಾರೆ. ಅದನ್ನು ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಅಸ್ತ್ರವೆಂದು ಪರಿಗಣಿಸಿದ್ದಾರೆ,” ಎಂದು ಉದಯನಿಧಿ ಹೇಳಿದ್ದಾರೆ.
ಆಶ್ಚರ್ಯದ ಸಂಗತಿಯೆಂದರೆ ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಕೂಡಾ ʼನಕಲಿ ಸುದ್ದಿʼಯನ್ನು ಆಧರಿಸಿ ನನ್ನ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ಉದಯನಿಧಿ ಹೇಳಿದರು.
“ಗೌರವಾನ್ವಿತ ಸ್ಥಾನಗಳನ್ನು ಹೊಂದಿರುವ ಅವರು ನನ್ನನ್ನು ನಿಂದಿಸುತ್ತಿರುವುದಕ್ಕಾಗಿ ನಾನೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಿಸಬೇಕು” ಎಂದು ಉದಯನಿಧಿ ಹೇಳಿದರು.
ನಾನು ಡಿಎಂಕೆಯ ಸಂಸ್ಥಾಪಕ ದಿವಂಗತ ಸಿಎನ್ ಅಣ್ಣಾದೊರೈ ಅವರ ದ್ರಾವಿಡ ಧೀಮಂತ ರಾಜಕೀಯ ವಾರಸುದಾರರಲ್ಲಿ ಒಬ್ಬ. ನಾವು ಯಾವುದೇ ಧರ್ಮದ ಶತ್ರುಗಳಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ.
“ಒಂದು ಧರ್ಮವು ಜನರನ್ನು ಸಮಾನತೆಯ ಕಡೆಗೆ ಕೊಂಡೊಯ್ಯುತ್ತದೆ ಮತ್ತು ಭ್ರಾತೃತ್ವವನ್ನು ಕಲಿಸುತ್ತದೆ ಎಂದರೆ ಆಗ ನಾನು ಆಧ್ಯಾತ್ಮಿಕವಾದಿಯಾಗುತ್ತೇನೆ, ಅದೇ ಧರ್ಮವು ಜಾತಿಗಳ ಹೆಸರಿನಲ್ಲಿ ಜನರನ್ನು ವಿಭಜಿಸಿದರೆ, ಅಸ್ಪೃಶ್ಯತೆ ಮತ್ತು ಗುಲಾಮಗಿರಿಯನ್ನು ಕಲಿಸಿದರೆ ಅದನ್ನು ವಿರೋಧಿಸುವ ಮೊದಲ ವ್ಯಕ್ತಿ ನಾನಾಗಿರುತ್ತೇನೆ ” ಎಂಬ ಅಣ್ಣಾದೊರೈ ಹೇಳಿಕೆಯನ್ನು ಉದಯನಿಧಿ ಉಲ್ಲೇಖಿಸಿದ್ದಾರೆ.
ಎಲ್ಲಾ ಜೀವಗಳ ಹುಟ್ಟು ಸಮಾನ ಎಂದು ಕಲಿಸುವ ಎಲ್ಲಾ ಧರ್ಮಗಳನ್ನು ಡಿಎಂಕೆ ಗೌರವಿಸುತ್ತದೆ ಎಂದು ಅವರು ಹೇಳಿದರು.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…