ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಶೀಘ್ರವೇ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹಾಸನ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿಯಿಂದ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಇದೀಗ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ಸಧ್ಯ ಜರ್ಮನಿಯಲಿದ್ದು, ಅಲ್ಲಿಂದ ದುಬಾಯ್‌ಗೆ ಹೋಗುವ ಶಂಕೆ ವ್ಯಕ್ತವಾಗಿದೆ.